ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ನಾಳೆಯೂ ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಮುಂದುವರಿಯಲಿದೆ. ಗುರುವಾರ ಹಲವು ಭಾಗಗಳಲ್ಲಿ ಧಾರಾಕಾರ ವರ್ಷಧಾರೆಯಾಗಿದ್ದು, ಕೊಡಗಿನ ನಾಪೊಕ್ಲು 12 ಸೆಂ.ಮೀ, ರಾಮನಗರ 9 ಸೆಂ.ಮೀ, ತುಮಕೂರಿನ ತುರುವೇಕರೆ 8 ಸೆಂ.ಮೀ ಮಳೆ ಬಿದ್ದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಆ.5ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ ಮತ್ತು ಹಾಸನದಲ್ಲಿ ಮುಂದಿನ 24 … Continue reading ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ನಾಳೆಯೂ ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್