More

    ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ

    ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

    ಹವಾಮಾನ ತಜ್ಞ ಪ್ರಸಾದ್ ಮಾತನಾಡಿ, ಮಹಾರಾಷ್ಟ್ರದ ವಿಧರ್ಭದಿಂದ ದಕ್ಷಿಣದ ತಮಿಳುನಾಡಿನವರೆಗೆ ಟ್ರಫ್ ಮುಂದುವರಿಕೆ ಹಿನ್ನೆಲೆ ಮಳೆ ಪ್ರಮಾಣ ಹೆಚ್ಚಿರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ.

    ಇದನ್ನೂ ಓದಿ: ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

    ದಕ್ಷಿಣ ಒಳನಾಡಿಗೆ ಇಂದು, ನಾಳೆ, ಮತ್ತು ಜೂನ್ 4 ನೇ ತಾರೀಖು ಬಹುತೇಕ ಕಡೆ ಜೋರು ಮಳೆ ಸಾಧ್ಯತೆ ಇದೆ. 2,3 ನೇ ತಾರೀಖು ಸಾಧಾರಣ ಮಳೆಯಾಗಲಿದೆ. ಕರಾವಳಿಗೆ ಮುಂದಿನ 5 ದಿನ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಕೆಲ ಕಡೆ ಮಾತ್ರ ಮಳೆ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

    ನೀರು ತುಂಬಿದ್ದ ಬಕೆಟ್‌ ಒಳಗೆ ತಲೆಕೆಳಗಾಗಿ ಬಿದ್ದು 13 ತಿಂಗಳ ಮಗು ಮೃತ್ಯು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts