Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಮಳೆ ಅಬ್ಬರಕ್ಕೆ ಸಂಚಾರ ಬಂದ್​, ಶಾಲಾ ಕಾಲೇಜಿಗೂ ರಜೆ, ಡ್ಯಾಂಗಳಿಗೆ ಜೀವಕಳೆ

Thursday, 14.06.2018, 9:03 AM       No Comments

ಮಡಿಕೇರಿ/ಚಿಕ್ಕಮಗಳೂರು/ಮಂಗಳೂರು: ಕಳೆದೆರಡು ವರ್ಷಗಳಿಂದ ಸರಿಯಾದ ಮಳೆಯಿಲ್ಲದೆ ಬತ್ತಿಹೋಗಿದ್ದ ರಾಜ್ಯದ ಜಲಾಶಯಗಳು ಈ ಬಾರಿಯ ಮುಂಗಾರು ಅಬ್ಬರಕ್ಕೆ ಮಳೆಗಾಲ ಅಂತ್ಯಕ್ಕೂ ಮುಂಚಿತವಾಗಿಯೇ ಭರ್ತಿಯಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಮಳೆ-ಬೆಳೆಯಿಲ್ಲದ ಬಳಲಿ ಬೆಂಡಾಗಿದ್ದ ರೈತರ ಮೊಗದಲ್ಲಿ ಮಳೆರಾಯನ ಆಗಮನ ಮತ್ತೆ ಮಂದಹಾಸ ತಂದಿದೆ.

ಹೌದು, ಕಳೆದೆರಡು ವರ್ಷಗಳಲ್ಲಿ ಎಲ್ಲೆಂದರಲ್ಲಿ ನೀರಿಗೆ ಹಾಹಾಕಾರ ಉಂಟಾಗಿತ್ತು. ಇದರ ನಡುವೆ ಕಾವೇರಿ ಗಲಾಟೆ, ಮಹದಾಯಿ ವಿವಾದದಂತಹ ಸಮಸ್ಯೆಗಳು ನೀರಿನ ಪ್ರಾಮುಖ್ಯತೆಯನ್ನು ಸಾರಿ ಸಾರಿ ಹೇಳುತ್ತಿದ್ದವು. ಮಳೆಗಾಗಿ ಜನರು ಹಿಡಿ ಶಾಪ ಹಾಕಿದ್ದೂ ಉಂಟು. ಆದರೆ, ಮಳೆರಾಯನ ಮನಸ್ಸು ಮಾತ್ರ ಕರಗಿರಲಿಲ್ಲ. ಆದರೆ, ಈ ಬಾರಿ ವರುಣ ತನ್ನ ಕೋಪವನ್ನು ಕಟ್ಟಿ ಪಕ್ಕಕ್ಕಿಟ್ಟು ಸಂಕಷ್ಟದಲ್ಲಿದ್ದ ಜನರ ನೆರವಿಗೆ ಧಾವಿಸಿದ್ದಾನೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಸೇರಿದಂತೆ ರಾಜ್ಯದೆಲ್ಲೆಡೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ವರುಣನ ದಯೆಯಿಂದ ರಾಜ್ಯದ ಅನೇಕ ಜಲಾಶಯಗಳು ಭರ್ತಿಯಾಗುತ್ತಿವೆ.

ಶಾಲಾ ಕಾಲೇಜುಗಳಿಗೆ ರಜೆ
ಕಾವೇರಿಯ ಮೂಲ ಜಿಲ್ಲೆಯಾದ ಕೊಡಗಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ ಐ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ, ಕೊಪ್ಪ, ಮೂಡಿಗೆರೆ ಹಾಗೂ N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೇ ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಿಸಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ ಆದೇಶಿಸಿದ್ದಾರೆ

ರಸ್ತೆ ಸಂಚಾರ ಬಂದ್​
ಕೊಡಗು ಜಿಲ್ಲೆಯ ವಿವಿಧೆಡೆ ರಸ್ತೆ ಬಂದ್ ಆಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆ ಅವಾಂತರಕ್ಕೆ ಕರ್ನಾಟಕ ಕೇರಳ ಸಂಪರ್ಕ ಕಲ್ಪಿಸುವ ಪೆರುಂಬಾಡಿ – ಮಾಕುಟ್ಟ ರಾಜ್ಯ ಹೆದ್ದಾರಿ ವಾಹನ ಸಂಚಾರ ನಿಷೇಧವಾಗಿದೆ. ಹೆದ್ದಾರಿಯಲ್ಲಿ  25 ಕಡೆ ರಸ್ತೆಯ ಮೇಲೆ ಭೂ ಕುಸಿತವಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ವಾಹನ ಸಂಚಾರ ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.

ತುಂಬಿ ಹರಿಯುತ್ತಿರುವ ನದಿಗಳು
ಚಿಕ್ಕಮಗಳೂರಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಭದ್ರಾ, ತುಂಗಾ ಹಾಗೂ ಹೇಮಾವತಿ ನದಿಗಳ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. (ದಿಗ್ವಿಜಯ ನ್ಯೂಸ್​)

 

Leave a Reply

Your email address will not be published. Required fields are marked *

Back To Top