ಯಡಕುಮರಿ ಬಳಿ ಗುಡ್ಡ ಕುಸಿತ, ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಪಶ್ಚಿಮ ಘಟ್ಟದಲ್ಲಿರುವ ಯಡಕುಮರಿ ಬಳಿ ಮತ್ತೆ ಗುಡ್ಡ ಕುಸಿದಿದ್ದು, ರೈಲು ಸಂಚಾರಕ್ಕೆ ತಡೆಯುಂಟಾಗಿದೆ.

ಗುಡ್ಡ ಕುಸಿತದಿಂದಾಗಿ ಕಾರವಾರಕ್ಕೆ ಹೊರಟಿದ್ದ ರೈಲು ಹಾಸನದಲ್ಲೇ ಸ್ಥಗಿತಗೊಂಡಿದ್ದು, ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

ರೈಲು ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಹಾಸನದಿಂದ ಬಸ್‌ ಮೂಲಕ ಸಂಚರಿಸುತ್ತಿದ್ದಾರೆ.

ಇದುವರೆಗೂ 4ನೇ ಬಾರಿ ಹಳಿ ಮೇಲೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ರೈಲ್ವೆ ಪ್ರಯಾಣ ಮಳೆಗಾಲ ಕಳೆಯುವ ತನಕ ಆಯಾಸ ಎನಿಸಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *