Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಕೇರಳದಲ್ಲಿ ಮುಂಗಾರು ಅಬ್ಬರ: ಕಬಿನಿ ಡ್ಯಾಂ ಭರ್ತಿಗೆ 7 ಅಡಿಯಷ್ಟೇ ಬಾಕಿ

Thursday, 14.06.2018, 9:25 AM       No Comments

ಮೈಸೂರು: ದೇವರ ನಾಡು ಕೇರಳದಲ್ಲಿ ಮುಂಗಾರು ಅಬ್ಬರ ಮುಂದುವರಿದಿದ್ದು, ರಾಜ್ಯದ ಕಬಿನಿ ಜಲಾಶಯಕ್ಕೆ ಅತಿ ಹೆಚ್ಚು ನೀರು ಹರಿದು ಬರುತ್ತಿದೆ. ಬಹುತೇಕ ಜಲಶಯ ಭರ್ತಿಯಾಗುವ ಮಟ್ಟಕ್ಕೆ ಬಂದಿದೆ.

ಎಚ್​.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಭರ್ತಿಗೆ ಕೇವಲ 7 ಅಡಿ ಮಾತ್ರ ಬಾಕಿಯಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, 2,277 ಅಡಿಗೆ ಜಲಾಶಯದ ನೀರಿನ ಮಟ್ಟ ಏರಿದೆ.

ಜಲಾಶಯದ ಗರಿಷ್ಟ ಮಟ್ಟ 2,284 ಅಡಿಗಳಾಗಿದ್ದು, ಜಲಾಶಯದ ಇಂದಿನ ಒಳಹರಿವು 22,500 ಕ್ಯೂಸೆಕ್​ಗಳಾಗಿದೆ. ನೀರಿನ ಹೊರ ಹರಿವು ಪ್ರಮಾಣವನ್ನು 1,000 ಕ್ಯೂಸೆಕ್​ಗೆ ಹೆಚ್ಚಳ ಮಾಡಲಾಗಿದ್ದು, ಯಾವುದೇ ಕ್ಷಣದಲ್ಲಾದರೂ ಹೊರಹರಿವಿನ ಪ್ರಮಾಣ ಮತ್ತೆ ಹೆಚ್ಚಳ ಮಾಡುವ ಸಾಧ್ಯತೆಯಿದೆ.

ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಎಚ್ಚರ ವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top