More

    ದ.ಕ.ಜಿಲ್ಲೆಯ ಕೆಲವೆಡೆ ಮಳೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನ ಬಳಿಕ ಹಾಗೂ ಸಾಯಂಕಾಲ ವೇಳೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮೂಡುಬಿದಿರೆಯ ಶಿರ್ತಾಡಿಯಲ್ಲಿ ದಟ್ಟ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಇಂದು ಕೂಡಾ ಮಧ್ಯಾಹ್ನ ಸಾಯಂಕಾಲ ವೇಳೆ ಚದುರಿದಂತೆ ಕೆಲವಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಿನದ ಗರಿಷ್ಠ ತಾಪಮಾನ 35.4 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

    ಮನೆಗೆ ಭಾಗಶಃ ಹಾನಿ: ತಾಲೂಕಿನಾದ್ಯಂತ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮುಂಡಾಜೆಯಲ್ಲಿ ಭಾರಿ ಗಾಳಿ ಬೀಸಿದ್ದು, ಇದರಿಂದ ಸ್ಥಳೀಯ ಪೆಲತಡ್ಕ ನಿವಾಸಿ ಪುಷ್ಪಾವತಿ ಎಂಬುವರ ಮನೆಗೆ ಮರಬಿದ್ದು ಭಾಗಶಃ ಹಾನಿಯಾಗಿದೆ. ಉಳಿದಂತೆ ಅಳದಂಗಡಿಯಲ್ಲಿ ಸಾಧಾರಣ ಮಳೆಯಾಗಿದ್ದು, ಬೆಳ್ತಂಗಡಿ, ಉಜಿರೆ ಮುಂತಾದೆಡೆ ಗುಡುಗು ಸಹಿತ ಹನಿ ಮಳೆಯಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts