ನಾಳೆಯಿಂದ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮೂನ್ಸೂಚನೆ..

rain
rain
Published on

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾ.29ರಿಂದ ಮಾ.31ವರೆಗೆ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಾ.29ರಂದು ಸಾಧಾರಣ ಮಳೆಯಾಗಲಿದೆ. ಭಾನುವಾರ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ತಾಪಮಾನ ಹೆಚ್ಚಳವಾದಂತೆ ಆಗಾಗ್ಯೆ ಅಕಾಲಿಕ ಮಳೆ ಬೀಳಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net