More

    ರಾಜ್ಯದಲ್ಲಿ ಮುಂದಿನ ಐದು ದಿನ ಭರ್ಜರಿ ವರ್ಷಧಾರೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಭರ್ಜರಿ ವರ್ಷಧಾರೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಏ.12ರಿಂದ ಏ.18ರವರೆಗೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ. ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​, ಬಾಗಲಕೋಟೆ, ಗದಗ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರಿನಲ್ಲಿ ಮುಂದಿನ ಮೂರು ದಿನ ಹಾಗೂ ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಏ.13,ಏ.14ರಂದು ಸಾಧಾರಣ ಪ್ರಮಾಣದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.

    ಯುಗಾದಿ ಹಬ್ಬ ಬಳಿಕ ರಾಜ್ಯದ ಕೆಲವೆಡೆ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಅಲ್ಲೆಲ್ಲಿ ಮಳೆಯಾಗಲಿದೆ. ಎರಡು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ಏರಿಕೆಯಾಗಿದ್ದ ಉಷ್ಣಾಂಶ ತುಸು ಇಳಿಮುಖವಾಗುತ್ತಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

    BS Yediyurappa; ಆರಂಭದಲ್ಲೇ ಕಾಂಗ್ರೆಸ್ ವಿರುದ್ಧ ಸಮರ ಸಾರಿದ ಬಿಎಸ್​ವೈ!

    ಶೇ.53 ಮಳೆ ಕುಂಠಿತ: ಜ.1ರಿಂದ ಏ.8ರವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 20 ಮಿಮೀ ಮಳೆ ಸುರಿಯಬೇಕಿತ್ತು. ಆದರೆ, 10 ಮಿಮೀ ಮಳೆಯಾಗಿದ್ದು ಶೇ. 53 ಮಳೆ ಕೊರತೆಯಾಗಿದೆ. ದಣ ಒಳನಾಡು ಶೇ. 77, ಉತ್ತರ ಒಳನಾಡು ಶೇ.85, ಮಲೆನಾಡು ಶೇ.10 ಮಳೆ ಅಭಾವ ಉಂಟಾದರೆ, ಕರಾವಳಿಯಲ್ಲಿ ವಾಡಿಕೆಗಿಂತ ಶೇ.83 ಅಧಿಕ ಮಳೆ ಸುರಿದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts