More

    ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಬಿರುಸು: ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೀದರ್​, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಚಿಕ್ಕಮಗಳೂರು, ವಿಜಯಪುರದ ಕೆಲ ಪ್ರದೇಶಗಳಲ್ಲಿ ಶುಕ್ರವಾರ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.13ರಿಂದ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗಲಿದೆ. ಏ.15ರಿಂದ ಏ.17ರವರೆಗೆ ಕೆಲವೆಡೆ ಸಾಧಾರಣ ಮಳೆ ಸುರಿದರೆ, ಏ.18ರಿಂದ ಮುಂದಿನ ಎರಡು ದಿನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

    ಉಳ್ಳವರು, ಇಲ್ಲದವರು ಒಂದಾಗಿ ಬಾಳಲು ಸಂವಿಧಾನ ಅವಕಾಶ

    ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಶುಕ್ರವಾರ ಭಾಗಶ@ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ,ಕನಿಷ್ಠ ತಾಪಮಾನದಲ್ಲಿ ಉಷ್ಣಾಂಶ ತುಸು ಇಳಿಮುಖವಾಯಿತು.ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಗಾಳಿ ವೇಗ ಗಂಟೆಗೆ 30-40 ಕಿ.ಮೀ.ಇರಲಿದೆ. ಮೇಲ್ಮೈ ಮಾರುತಗಳು ರಭಸದಿಂದ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts