13ರಿಂದ ರಾಜ್ಯದಲ್ಲಿ ಮಳೆ:ದಕ್ಷಿಣ ಕರ್ನಾಟಕದಲ್ಲಿ ಬಿರುಸು

Heavy Rain

ಬೆಂಗಳೂರು: ರಾಜ್ಯದಲ್ಲಿ ನ.13ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ನ.14ರಿಂದ ಮುಂದಿನ 3 ದಿನ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ನ.13ರಿಂದ ನ.16ರವರೆಗೆ ಗುಡುಗು ಸಹಿತ ವರ್ಷಧಾರೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನ.14ರಿಂದ ಮುಂದಿನ 2 ದಿನ ಹಾಗೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ನ.15ರಿಂದ ನ.16ರವರೆಗೆ ಮಳೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಂಜು ಕವಿದ ವಾತಾವರಣ: ರಾಜ್ಯದಲ್ಲೆಡೆ ನಸುಕಿನ ವೇಳೆ ಮಂಜು ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮಂಜು ಆವರಿಸುತ್ತಿರುವ ಕಾರಣ ವಾಹನ ಸವಾರರು ನಿಧಾನವಾಗಿ ವಾಹನ ಚಲಾಯಿಸುತ್ತಿದ್ದಾರೆ. ವಾಗಿಂಗ್​ ತೆರಳುವವರಿಗೆ ಅಡಚಣೆಯಾಗುತ್ತಿದೆ.

 

ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

Share This Article

ಉಡುಗೆಗೆ ಮ್ಯಾಚ್​ ಆಗುವ ಲಿಪ್​ಸ್ಟಿಕ್​​​ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ಟಿಪ್ಸ್​​ | Beauty Tips

ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…

ಚಳಿಗಾಲದಲ್ಲಿ ವಿಟಮಿನ್​​ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips

ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…

Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!

Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್​​ನಲ್ಲಿ…