ರಾಜ್ಯದಲ್ಲಿ ಹವಾಮಾನ ವೈಪರೀತ್ಯ | ಮುಂದಿನ 5 ದಿನ ಮಳೆ; ಕೆಲವಡೆ ಉಷ್ಣಾಂಶ ಹೆಚ್ಚಳ

Rain
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಮಾ.31ರಿಂದ ಏ.4ರವರೆಗೆ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಹಾಸನದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಟೀಕೆ ‌ಬೇಡ; ಭವಾನಿ ರೇವಣ್ಣಗೆ ಟಿಕೆಟ್ ಇಲ್ಲ ಎಂಬ ಸುಳಿವು ನೀಡಿದ್ರಾ ಎಚ್​ಡಿಕೆ?

ಗುರುವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಅತಿ ಹೆಚ್ಚು 39.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬದಾಮಿಯಲ್ಲಿ ಕನಿಷ್ಠ ತಾಪಮಾನದಲ್ಲಿ 13.6 ಉಷ್ಣಾಂಶ ಇತ್ತು. ಕೆಲವಡೆ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಹೆಚ್ಚು ಸಖೆ ಕಾಣಿಸಿಕೊಳ್ಳುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net