More

    ಪಾಕ್​​ನಲ್ಲಿ ಧಾರಾಕಾರ ಮಳೆ 37 ಸಾವು; ಜನಜೀವನ ಅಸ್ತವ್ಯಸ್ತ!

    ಕರಾಚಿ: ಕಳೆದ ಎರಡು ದಿನಗಳಿಂದ ಪಾಕಿಸ್ತಾನದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ 37 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ಕೆಲವೆಡೆ ಮನೆ ಹಾಗೂ ಭೂಕುಸಿತ ಉಂಟಾಗಿದೆ. ಅಲ್ಲದೇ ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಇದನ್ನೂ ಓದಿ: ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು 

    ಗುರುವಾರ ರಾತ್ರಿಯಿಂದ ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಭಾರೀ ಮಳೆಯಾಗಿದೆ. ಬಜೌರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೇಶಾವರ್, ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಈ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು, ಹೆಚ್ಚಾಗಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

    ಕಳೆದ 48 ಗಂಟೆಗಳಲ್ಲಿ ಬಜೌರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೇಶಾವರ್, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಲಕ್ಕಿ ಮಾರ್ವತ್ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಕೆಪಿಕೆ ಅಲಿ ಅಮೀನ್ ಗಂದಾಪುರ ಅವರು ಸ್ಥಳಕ್ಕೆ ಭೇಟಿ ನೀಡಿದ್ದು ಮಳೆಯಿಂದ ಸಂಕಷ್ಟದಲ್ಲಿರುವ ಜನರರಿಗೆ ಎಲ್ಲಾ ರೀತಿಯಲ್ಲೂ ಸಹಕರಿಸುವುದಾದಗಿ ಹೇಳಿದ್ದು ಅವರ ಹಾನಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.

    ಮಳೆ ಮತ್ತು ಹಿಮದಿಂದ ಉಂಟಾದ ಭೂಕುಸಿತದಿಂದಾಗಿ ಪಾಕಿಸ್ತಾನ ಹಾಗೂ ಚೀನಾದೊಂದಿಗೆ ಸಂಪರ್ಕಿಸುವ ಕಾರಕೋರಂ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶಗಳ ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ಅಧಿಕಾರಿಗಳು ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಚ್ಚು ಸಾವುನೋವುಗಳು ಮತ್ತು ಹಾನಿಗಳು ವರದಿಯಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಪ್ರದೇಶದಲ್ಲಿ ಐವರು ಸಾವನ್ನಪ್ಪಿದ್ದಾರೆ.

    2022 ರಲ್ಲಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಪಾಕಿಸ್ತಾನದ ಹಲವು ಸ್ಥಳಗಳಲ್ಲಿ ಹೆಚ್ಚು ಹಾನಿ ಸಂಭವಿಸಿತ್ತು. ಈ ಸಂದರ್ಭದಲ್ಲಿ 1,800 ಕ್ಕೂ ಹೆಚ್ಚು ಸಾವನ್ನಪ್ಪಿದ್ದರು. ಸುಮಾರು 33 ಮಿಲಿಯನ್ ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಎಂಟು ಮಿಲಿಯನ್ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿತ್ತು.

    ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಯ ವಾರ್ಷಿಕ ಆದಾಯ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts