ಕುರುಗೋಡು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದ ಬುಧವಾರ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
![blank](https://www.vijayavani.net/wp-content/plugins/wp-fastest-cache-premium/pro/images/blank.gif)
110 ಕೆವಿ ವಿತರಣಾ ಕೇಂದ್ರದಿಂದ ಬೆಳಗ್ಗೆ 9 ಗಂಟೆಗೆ ಪವರ್ ಕಟ್ ಮಾಡಿ 11 ಗಂಟೆಗೆ ನೀಡಲಾಯಿತು. ಕೆಲ ಹೊತ್ತಿನಲ್ಲೇ ಸಂಪರ್ಕ ಕಡಿತಗೊಳಿಸಲಾಯಿತು. ಸಂಜೆ 6:30 ನಂತರ ವಿದ್ಯುತ್ ಸರಬರಾಜು ಮಾಡಲಾಯಿತು. ಕರೆಂಟ್ ಕಣ್ಣಾಮುಚ್ಚಾಲೆಯಿಂದ ಕಚೇರಿ ಹಾಗೂ ಮನೆ, ವ್ಯಾಪಾರ, ವಹಿವಾಟಿಗೆ ಸಂಬಂಧಿಸಿದ ಕೆಲಸಗಳಿಗೆ ಅಡಚಣೆಯಾಯಿತು.
![blank](https://www.vijayavani.net/wp-content/plugins/wp-fastest-cache-premium/pro/images/blank.gif)
ಆನ್‌ಲೈನ್ ಕೇಂದ್ರಗಳಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಂದ ಜನರಿಗೆ ಕರೆಂಟ್ ಇಲ್ಲ ಎಂದು ಹೇಳಿ ಕಳಿಸುತ್ತಿರುವುದು ಸಾಮಾನ್ಯವಾಗಿತ್ತು. ವಿದ್ಯುತ್ ವ್ಯತ್ಯಯ ಕುರಿತು ಜೆಸ್ಕಾಂ ಅಧಿಕಾರಿಗಳು ಒಂದೆರಡು ದಿನ ಮುಂಚೆಯೇ ತಿಳಿಸಬೇಕು ಎಂಬುದು ಜನರ ಒತ್ತಾಯವಾಗಿದೆ.