More

    ಮಾನ್ಸೂನ್​ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ:ಹವಾಮಾನ ಇಲಾಖೆ ಮಾಹಿತಿ

    ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಆಶಾದಾಯಕವಾಗಿದೆ.ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಯಾವಾಗ ಮುಂಗಾರು ಮಾರುತಗಳು ಆಗಮಿಸುವ ಬಗ್ಗೆ ಮೇ ಕೊನೆಯ ವಾರದಲ್ಲಿ ನಿಖರ ಮಾಹಿತಿ ದೊರೆಯಲಿದೆ.

    ಫೆಸಿಫಿಕ್​ ಸಮುದ್ರದ ಪೂರ್ವ ಭಾಗದಲ್ಲಿ ಸಮುದ್ರ ನೀರಿನ ಉಷ್ಣಾಂಶ ವಾಡಿಕೆಗಿಂತ 1 ಡಿಗ್ರಿ ಸೆಲ್ಸಿಯಸ್​ನಿಂದ 1.5 ಡಿಗ್ರಿ ಸೆಲ್ಸಿಯಸ್​ವರೆಗೆ ಹೆಚ್ಚು ದಾಖಲಾದರೆ “ಎಲ್​ ನಿನೋ’ ಉಂಟಾಗುತ್ತದೆ. ಫೆಸಿಫಿಕ್​ ಸಮುದ್ರದ ಪಶ್ಚಿಮ ಭಾಗದಲ್ಲಿ ಸಮುದ್ರ ನೀರಿನ ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇದ್ದರೆ “ಲಾ-ನಿನಾ’ ಎಂದು ಕರೆಯಲಾಗುತ್ತಿದೆ. ಎಲ್​ ನಿನೋ ಮತ್ತು ಲಾ-ನಿನಾ ಪರಿಸ್ಥಿತಿ ಮೇರೆಗೆ ಮಳೆ ಮೇಲೆಯ ಪರಿಣಾಮ ಬೀರುತ್ತದೆ. ಕಳೆದ ವರ್ಷ ಎಲ್​ ನಿನೋ ಪ್ರಭಾವವು ಮುಂಗಾರು ಮೇಲೆ ಪರಿಣಾಮ ಬೀರಿತ್ತು. ಇದರಿಂದಾಗಿ ರಾಜ್ಯದಲ್ಲಿ ತೀವ್ರ ಮಳೆ ಕುಂಠಿತವಾಗಿ ಬರಗಾಲ ಉಂಟಾಗಿದೆ. . ಆದರೆ, ಜಾಗತಿಕ ನಿಯಂತ್ರಕ ಸೂಚ್ಯಂಕ ಪ್ರಕಾರ ಕಳೆದ ಫೆಬ್ರವರಿಯಿಂದ ದುರ್ಬಲಗೊಂಡು ಮಧ್ಯಮ ಹಂತಕ್ಕೆ ಬಂದಿರುವ “ಎಲ್​ ನಿನೋ’ ಜೂನ್​ ಅಥವಾ ಜುಲೈನಲ್ಲಿ ಶೂನ್ಯ ಹಂತಕ್ಕೆ ಬರಲಿದೆ. ನಂತರ, “ಲಾ-ನಿನಾ’ ಬರಲಿದೆ. ಇದರಿಂದಾಗಿ ಈ ಬಾರಿ ಮುಂಗಾರುನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುತ್ತದೆ.

    ತಾಯಂದಿರ ಬಗ್ಗೆ ಹೇಳಿಕೆ; ಕುಮಾರಸ್ವಾಮಿ ವಿಷಾದ

    ಏ.18ರಿಂದ ಮಳೆ
    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏ.18ರಿಂದ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಉಡುಪಿ, ದಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ ದಿನಗಳು ಬಿರುಸಾಗಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.

    ರಾಜ್ಯದಲ್ಲಿ ಮುಂದಿನ ಎರಡು ದಿನ ಒಣಹವೆ ಇರಲಿದೆ. ನಂತರ, ಬಹುತೇಕ ಜಿಲ್ಲೆಗಳಲ್ಲಿ ವರ್ಷಧಾರೆಯಾಗಲಿದೆ. ಬಿಸಿಲು ಜತೆಗೆ ಮಳೆಯೂ ಸುರಿಯಲಿದೆ. ಪ್ರಸ್ತುತ ತಿಂಗಳು ಹಾಗೂ ಮೇನಲ್ಲಿ ಮಳೆಯಾಗಲಿದೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ಯ ಗರಿಷ್ಠ, ಕನಿಷ್ಠ ತಾಪಮಾನದಲ್ಲಿ ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್​ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ.
    | ಪ್ರಸಾದ್​,ರಾಜ್ಯ ಹವಾಮಾನ ಇಲಾಖೆ ವಿಜ್ಞಾನಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts