More

  ಉತ್ತರ ಒಳನಾಡಿಗೆ ಮತ್ತೆ ಅಡಿಯಿಟ್ಟ ವರುಣ

  ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿರುವ ಬೆನ್ನಲ್ಲೇ ಹಲವು ದಿನಗಳ ಬಳಿಕ ಮತ್ತೆ ಮಳೆ ಅಡಿಯಿರಿಸಿದೆ.

  ಕಳೆದೊಂದು ತಿಂಗಳಿನಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಕಾಣೆಯಾದಂತೆ ಭಾಸವಾಗಿದ್ದು, ವರ್ಷಧಾರೆ ಕ್ಷೀಣಿಸಿತ್ತು. ಇದೀಗ ವಾತಾವರಣದಲ್ಲಿ ತುಸು ಬದಲಾವಣೆಯಾಗಿದ್ದು, ಶನಿವಾರದಿಂದ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

  ಆದರೆ, ಮಳೆನಾಡು ಒಳಗೊಂಡಿರುವ ದಕ್ಷಿಣ ಒಳನಾಡು ಪ್ರದೇಶದಲ್ಲಿ ಮಳೆ ಕ್ಷೀಣಿಸಿದೆ. ಕೆಲವೆಡೆ ಮಾತ್ರ ಸಾಧಾರಣ ಪ್ರಮಾಣದ ವರ್ಷಧಾರೆಯಾಗಬಹುದು.

  ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣಕನ್ನಡದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ಇನ್ನೂ 2-3 ದಿನ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts