ಬೆಳಗಾವಿ: ಜಿಲ್ಲಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅವಸ್ತವ್ಯಸ್ತಗೊಂಡಿದೆ.ಮಹಾ’ ಮಳೆಯಿಂದ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಮುಳುಗಡೆಯಾಗಿವೆ.
ಇನ್ನೊಂದೆಡೆ ಮಲಪ್ರಭಾ ಜಲಾಶಯದಿಂದ ಭಾನುವಾರ ಮಧ್ಯಾಹ್ನದ ವೇಳೆಗೆ 22,600 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿರುವುದರಿಂದ 4 ಹಿನ್ನೀರ ಪ್ರದೇಶದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಇದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಆತಂಕ ಮತ್ತೆ ಹೆಚ್ಚಿದೆ. ‘ಮಹಾ’ ಮಳೆಯಿಂದ ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಏಳು ಸೇತುವೆಗಳು ಮುಳುಗಡೆಯಾಗಿವೆ.
ಕೃಷ್ಣಾ ನದಿ ನೀರಿನ ಮಟ್ಟ ಏರುತ್ತಿದ್ದು, ಕರ್ನಾಟಕ-ಮಹಾರಾಷ್ಟ್ರದ ನಡುವೆ ಸಂಪರ್ಕ ಕಲ್ಪಿಸುವ ರಾಯಬಾಗ ತಾಲೂಕಿನ ಕುಡಚಿ ಸೇತುವೆ ಶನಿವಾರ ರಾತ್ರಿಯೇ ಮುಳುಗಡೆಯಾಗಿದೆ. ಬಾಗಲಕೋಟೆ, ರಾಯಚೂರ ಜಿಲ್ಲೆಗಳ ಜನರು ಸುತ್ತು ಬಳಸಿ ಮಹಾರಾಷ್ಟ್ರಕ್ಕೆ ಪ್ರಯಾಣಿಸುತ್ತಿದ್ದಾರೆ.
ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಹಿಪ್ಪರಗಿ ಬ್ಯಾರೇಜ್ನಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿದು ಬಡಲಾಗುತ್ತಿದೆ. ಜನರ ಸುರಕ್ಷತೆಗೆ ಒತ್ತು ನೀಡಿದ್ದೇವೆ ಎಂದು ತಹಸೀಲ್ದಾರ್ ಡಾ.ಸಂತೋಷ ಬಿರಾದಾರ ತಿಳಿಸಿದ್ದಾರೆ.
ವೃದ್ಧೆ ನೀರುಪಾಲು: ಖಾನಾಪುರ ಪಟ್ಟಣದಲ್ಲಿ ಮಲಪ್ರಭಾ ನದಿ ಪ್ರವಾಹ ವೀಕ್ಷಿಸಲು ಹೋಗಿದ್ದ ಸುಶೀಲಾ ಬೋಗಾರ (85) ಕಾಲು ಜಾರಿಬಿದ್ದು ನೀರುಪಾಲಾಗಿದ್ದಾರೆ. ಪಶ್ಚಿಮಘಟ್ಟದ ಸೆರಗಿನಲ್ಲಿರುವ ಖಾನಾಪುರ ತಾಲೂಕಿನಲ್ಲಿ ವರುಣನ ಅಬ್ಬರ ಹೆಚ್ಚಿದ್ದು, ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳು ಮತ್ತು ರೈಲು ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕ್ಯಾಸಲರಾಕ್-ಕುಲೆಂ ರೈಲ್ವೆ ನಿಲ್ದಾಣಗಳ ನಡುವೆ ಮತ್ತು ಚೋರ್ಲಾ ಘಾಟ್ನಲ್ಲಿ ಭೂಕುಸಿತವಾಗಿದೆ. ಸಿಂಧನೂರ-ಹೆಮ್ಮಡಗಾ, ಜಾಂಬೋಟಿ-ಜತ್ ರಾಜ್ಯ ಹೆದ್ದಾರಿಗಳಲ್ಲೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಮಲಪ್ರಭಾ ಜಲಾಶಯದಿಂದ ಭಾನುವಾರ ಮಧ್ಯಾಹ್ನದ ವೇಳೆಗೆ 22,600 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿರುವುದರಿಂದ ಮುನವಳ್ಳಿ ಪಟ್ಟಣದ ಕೆಲವು ಅಂಗಡಿ ಹಾಗೂ ಜಮೀನುಗಳು ಜಲಾವೃತಗೊಂಡಿವೆ.