

ಬೆಂಗಳೂರು: ತೇವಾಂಶ ಭರಿತ ಮೋಡಗಳಿರುವ ಪರಿಣಾಮ ಶನಿವಾರ ರಾತ್ರಿ ಹಾಗೂ ಭಾನುವಾರ ಮುಂಜಾನೆ ಬೆಂಗಳೂರು ನಗರ ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಬೆಳಗ್ಗೆಯಿಂದ ಹಲವು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇತ್ತು.ಮಧ್ಯಾಹ್ನ ಕೆಲ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ವರ್ಷಧಾರೆಯಾಗಿತ್ತು.ದಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ,ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ರಾಯಚೂರು, ಹಾವೇರಿ, ಧಾರವಾಡ ಮತ್ತು ಗದಗದಲ್ಲಿ ಏ.14ರಿಂದ ಏ.20ರವರೆಗೆ ಬಿರುಗಾಳಿ ಸಹಿತ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ತಾಪಮಾನ ಇಳಿಕೆ: ಉತ್ತರ ಕರ್ನಾಟಕದ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಆ ಭಾಗದಲ್ಲಿ 2-3 ಡಿ.ಸೆ.ಉಷ್ಣಾಂಶ ಇಳಿಕೆಯಾಗಿದ್ದು, ಮುಂದಿನ 5 ದಿನ ವಾತಾವರಣ ಯಾವುದೇ ಬದಲಾವಣೆ ಇರುವುದಿಲ್ಲ. ಭಾನುವಾರ ಕಲಬುರಗಿಯಲ್ಲಿ 40.4 ಡಿ.ಸೆ. ಉಷ್ಣಾಂಶ ದಾಖಲಾಗಿದೆ. ಕರಾವಳಿ, ದಣ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳಲ್ಲೂ 35&36 ಡಿ.ಸೆ. ಉಷ್ಣಾಂಶ ವರದಿಯಾಗುತ್ತಿದೆ. ಈ ವ್ಯಾಪ್ತಿಯಲ್ಲಿಯೂ ಮುಂದಿನ 5 ದಿನ ವಾತಾವರಣದಲ್ಲಿ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33. 7 ಮತ್ತು 20.3 ಡಿ.ಸೆ. ಇರುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.