More

    ರಾಜ್ಯದಲ್ಲಿ ಇನ್ನೆಷ್ಟು ದಿನ ಜೋರು ಮಳೆ?; ಕರಾವಳಿಯಲ್ಲಿ ಆರೆಂಜ್ ಅಲರ್ಟ್..

    ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕು ದಿನಗಳ ಕಾಲ ಇನ್ನಷ್ಟು ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಭಾನುವಾರ ಕೊಡಗಿನ ಭಾಗಮಂಡಲ 160 ಮಿಮೀ, ನಾಪೋಕ್ಲು 100 ಮಿಮೀ, ಚಿಕ್ಕಮಗಳೂರಿನ ಶೃಂಗೇರಿ 140 ಮಿಮೀ, ಜಯಪುರ 120 ಮಿಮೀ, ದಕ್ಷಿಣ ಕನ್ನಡದ ಧರ್ಮಸ್ಥಳ ಮತ್ತು ಬೆಳ್ತಂಗಡಿ ತಲಾ 90 ಮಿಮೀ, ಮಾನಿ ಮತ್ತು ಪುತ್ತೂರು ತಲಾ 80 ಮಿಮೀ ಮಳೆ ಸುರಿದಿದೆ.

    ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ 48 ಗಂಟೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಅಲ್ಲದೆ, ಈ ಭಾಗಗಳಲ್ಲಿ ಜು. 6, 7ರಂದು ಯೆಲ್ಲೋ ಅಲರ್ಟ್ ಇರಲಿದೆ.

    ಇದನ್ನೂ ಓದಿ: ರಾಜಧಾನಿಯಲ್ಲೇ ಪತ್ತೆಯಾಯ್ತು ಮಹಿಳೆಯ ಸುಟ್ಟು ಕರಕಲಾದ ದೇಹ!; ಇನ್ನೂ ಪತ್ತೆಯಾಗದ ಗುರುತು..

    ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಜು. 4ರಿಂದ ಜು.7ರವರೆಗೆ ಹಾಗೂ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಧಾರವಾಡ, ಬಾಗಲಕೋಟೆ ಮತ್ತು ಚಾಮರಾಜನಗರದಲ್ಲಿ ಜು.5ರಿಂದ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

    ‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

    ಗ್ರಾಮಸ್ಥರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಹೋದವನ ದುರಂತ ಸಾವು: ‘ಆಘಾತಕಾರಿ’ ಘಟನೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts