ಕೊಡಗಲ್ಲಿ ಭರ್ಜರಿ ಮಳೆ: ಮಾಕುಟ್ಟ ರಸ್ತೆ ಜಲಾವೃತ

ಮಡಿಕೇರಿ: ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ವರುಣನ ಅಬ್ಬರ ಹೆಚ್ಚಾಗಿದ್ದು ಹಲವೆಡೆ ವಿದ್ಯುತ್​ ಸಂಪರ್ಕ ಕಡಿತಗೊಂಡಿದೆ. ಮಾಕುಟ್ಟ ರಸ್ತೆ ಸಂಪೂರ್ಣ ಜಲಾವೃತವಾಗಿ ಸಂಚಾರ ಅಸ್ತವ್ಯಸ್ತವಾಗಿದೆ.

ಕೇರಳಕ್ಕೆ ಹೋಗುವ ಮಾರ್ಗದ ರಸ್ತೆ ಬದಿಯ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಚಿಕ್ಕಮಗಳೂರು, ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಇಂದು ಕೂಡ ಶೃಂಗೇರಿ, ಕೊಪ್ಪ, ಎನ್​.ಆರ್​.ಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ ಐದು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಭದ್ರಾ, ತುಂಗಾ, ಹೇಮಾವತಿ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ಚಾರ್ಮಾಡಿ ಘಾಟ್​ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು ಮಣ್ಣು ತೆರವು ಕಾರ್ಯಾಚರಣೆ ಮುಂದುವರಿದಿದೆ.

Leave a Reply

Your email address will not be published. Required fields are marked *