

Bengaluru Weather Report: ರಾಜ್ಯದಲ್ಲಿ ಮೇ 28 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೇ 31 ರವರೆಗೆ ಮಳೆಯಾಗಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡುಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಇಂದು ಎಲ್ಲಿ ರೆಡ್ ಅಲರ್ಟ್?
ಇಂದು ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡಕ್ಕೆ ಅತ್ಯಂತ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ನೀಡಲಾಗಿದೆ.
ಎಲ್ಲಿ ಆರೆಂಜ್ ಅಲರ್ಟ್?
ಬೆಳಗಾವಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್ ಹಾಗೂ ಕಲಬುರ್ಗಿಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಮಂಗಳೂರು, ಮೂಡಬಿದ್ರಿ, ಧರ್ಮಸ್ಥಳ, ಪುತ್ತೂರು, ಬಂಟ್ವಾಳ, ಸುಳ್ಯ, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಕಾರಣ, ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ, ದುರ್ಬಲ ಮರಗಳು ಮತ್ತು ಸಣ್ಣ ಟ್ರಾಫಿಕ್ ಅಸ್ತವ್ಯಸ್ತವಾಗಿರುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ನಿವಾಸಿಗಳು ಮನೆಯೊಳಗೆ ಇರಲು ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಲು ವಿನಂತಿಸಿದೆ. ಸುರಕ್ಷಿತ ಆಶ್ರಯವನ್ನು ಪಡೆಯಿರಿ ಮತ್ತು ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಮಳೆ ಬಂದ ತಕ್ಷಣ, ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್ಪ್ಲಗ್ ಮಾಡಿ ಮತ್ತು ವಿದ್ಯುತ್ ವಾಹಕ ವಸ್ತುಗಳಿಂದ ದೂರವಿರಿ ಎಂದು ಎಚ್ಚರಿಕೆಯನ್ನು ನೀಡಿದೆ. (ಏಜೆನ್ಸೀಸ್)