More

    ರಾಜಧಾನಿಯಲ್ಲಿ ಮಳೆ ಆರಂಭ; ಸೂಚನೆ ನೀಡಿದ ಹವಾಮಾನ ಇಲಾಖೆ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ಇಂದು ಯಶವಂತಪುರ, ಮೆಜೆಸ್ಟಿಕ್, ಕುರುಬರಹಳ್ಳಿ, ರಾಜಾಜಿನಗರ, ಎಂಜಿ ರೋಡ್, ರೇಸ್ ಕೋಸ್೯ ರಸ್ತೆಯಲ್ಲಿ ಮಳೆಯಾಗಿದೆ.

    ಇನ್ನೂ ಮೂರು-ನಾಲ್ಕು ದಿನ ನಗರದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಡಿಮೆ. ನಾಳೆಯಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

    ಇನ್ನು ಕರಾವಳಿ ಭಾಗದಲ್ಲಿ ಆರ್ಭಟಿಸುತ್ತಿರುವ ಮಳೆ ನಾಳೆಯಿಂದ ಇಳಿಮುಖವಾಗಲಿದೆ. ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಮಳೆಯಾಗುತ್ತಿದ್ದರೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಶೇ.24ರಷ್ಟು ಕಡಿಮೆ ಮಳೆಯಾಗಿದೆ.

    ನಾಪೋಕ್ಲುವಿನಲ್ಲಿ ಧಾರಾಕಾರ ಮಳೆ
    ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾವೇರಿ ನದಿ ನೀರಿನಮಟ್ಟ ಏರಿಕೆಯಾಗಿದೆ. ಭಾರಿ ಗಾಳಿ ಮಳೆಯಿಂದ ಮರಗಳು ನೆಲಕ್ಕುರುಳಿವೆ.

    ಕೊಡಗು ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆ: ಶಾಲಾ ಕಾಲೇಜುಗಳಿಗೆ ರಜೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts