Rain Alert : ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

rain final
Published on

ಬೆಂಗಳೂರು:  ( Rain Alert ) ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net