ಗುಂಡ್ಮಿಯಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮ

kota (1)
Published on

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾವಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲೂಕು, ಪಾಂಡೇಶ್ವರ ವಲಯದ ಗುಂಡ್ಮಿ ಕಾರ್ಯ ಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಒಕ್ಕೂಟ ಅಧ್ಯಕ್ಷ ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಚಾಲನೆ ನೀಡಿ ಮಾತನಾಡಿ, ಮಳೆ ನೀರು ಸಂಗ್ರಹ ಹಾಗೂ ಪ್ರಯೋಜನಗಳ ಬಗ್ಗೆ ತಿಳಿಸಿದರು.

ತಾಲೂಕು ಕೃಷಿ ಅಧಿಕಾರಿ ರಾವೇಂದ್ರ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಸ್ಥಳೀಯರಾದ ಮಂಜುನಾಥ್ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷ ಶೇಖರ್ ಪೂಜಾರಿ, ಶೌರ್ಯ ಟೀಮ್‌ನ ಸದಸ್ಯ ಕಾಳಿಂಗ ಪೂಜಾರಿ, ಫಲಾನುಭವಿಗಳು, ಶೌರ್ಯ ತಂಡದ ಸದಸ್ಯರು ಉಪಸ್ಥಿತರಿದರು. ವಲಯ ಮೇಲ್ವಿಚಾರಕಿ ಜಯಲಕ್ಷ್ಮೀ ಸ್ವಾಗತಿಸಿ, ನಿರೂಪಿಸಿದರು. ಸೇವಾ ಪ್ರತಿನಿಧಿ ಶಶಿಕಲಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net