ಗಿಳಿಯಾರಿನಲ್ಲಿ ಮಳೆನೀರು ಕೊಯ್ಲು ತರಬೇತಿ

rain water
ಮಳೆ ನೀರು ಕೊಯ್ಲು ಕಾರ್ಯಕ್ರಮವನ್ನು ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷೆ ರಾಧಾ ದೇವಾಡಿಗ, ಕೃಷಿ ಮೇಲ್ವಿಚಾರಕ ರಾಘವೇಂದ್ರ ಮತ್ತಿತರರು ಇದ್ದರು
Published on

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬ್ರಹ್ಮಾವರ ಕೋಟ ವಲಯದ ಗಿಳಿಯಾರು ಒಕ್ಕೂಟ ವತಿಯಿಂದ ಮಳೆ ನೀರು ಕೊಯ್ಲು ಕುರಿತು ಕೃಷಿ ತರಬೇತಿ ಇತ್ತೀಚಿಗೆ ನಡೆಯಿತು. ಕೋಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ಮಳೆಕೊಯ್ಲು, ಬೋರ್‌ವೆಲ್ ಮರುಪೂರಣ, ಚೆಕ್ ಡ್ಯಾಂ ರಚನೆ ಕುರಿತು ಮಾಹಿತಿ ನೀಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಶ್ರೀಲಕ್ಷ್ಮೀ ಪ್ರಭು ಮನೆಯಲ್ಲಿ ಮಳೆ ಕೊಯ್ಲಿನ ಪ್ರಾತ್ಯಕ್ಷಿಕೆ ನಡೆಯಿತು. ಯೋಜನೆಯ ಒಕ್ಕೂಟದ ಅಧ್ಯಕ್ಷೆ ಅಧ್ಯಕ್ಷೆ ರಾಧಾ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಕೋಟ ಶೌರ್ಯ ವಿಪತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು. ಸರೋಜಾ ವಂದಿಸಿದರು.ವಲಯ ಮೇಲ್ವಿಚಾರಕಿ ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net