More

    ನಾಳೆಯಿಂದ ಎರಡು ದಿನ ರೈತ ಸಂಗಮ

    ನಾಗಮಂಗಲ: ಭೈರವೈಕ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 79ನೇ ಜಯಂತ್ಯುತ್ಸವ ಹಾಗೂ 11ನೇ ವರ್ಷದ ಸಂಸ್ಕರಣಾ ಮಹೋತ್ಸವದ ಅಂಗವಾಗಿ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಸಭಾಭವನದಲ್ಲಿ ಜ.12 ಮತ್ತು 13ರಂದು ರೈತ ಸಂಗಮ ಆಯೋಜಿಸಲಾಗಿದೆ.

    ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಹಯೋಗದಲ್ಲಿ ಕೃಷಿ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಮೌಲ್ಯಸರಪಳಿ ಕುರಿತು ಉತ್ಪಾದಕರು ಮಾರುಕಟ್ಟೆದಾರರ ಕಾರ್ಯಾಗಾರ, ಕೃಷಿ ಮೇಳ ಹಾಗೂ ವಸ್ತುಪ್ರದರ್ಶನ ನಡೆಯಲಿದೆ.

    12ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದು, ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸಲಿದ್ದಾರೆ. 13ರಂದು ಮಧ್ಯಾಹ್ನ 12.30ಕ್ಕೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆಯೋಜಿಸಿರುವ ಸಮಾರೋಪ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ತಾಂತ್ರಿಕ ಅಧಿವೇಶನ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts