More

    ರೈತರ ಹೋರಾಟ ಹತ್ತಿಕ್ಕುತ್ತಿರುವುದು ಖಂಡನೀಯ

    ಮಳವಳ್ಳಿ: ರೈತ ಸಂಘಟನೆಗಳ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ರೈತರ ಮೇಲೆ ಕೇಂದ್ರ ಸರ್ಕಾರ ನಡೆಸಿರುವ ಲಾಠಿ ಪ್ರಹಾರ, ರಬ್ಬರ್ ಬುಲೆಟ್, ಅಶ್ರುವಾಯು ಸಿಡಿತ ಮತ್ತು ಸಾಮೂಹಿಕ ಬಂಧನವನ್ನು ಕರ್ನಾಟಕ ಪ್ರಾಂತ ರೈತ ಸಂಘ ಖಂಡಿಸುತ್ತದೆ ಎಂದು ಸಂಘದ ತಾಲೂಕು ಅಧ್ಯಕ್ಷ ಎನ್.ಎಲ್.ಭರತ್‌ರಾಜ್ ತಿಳಿಸಿದರು.

    ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಎಸೆಯಲು ಡ್ರೋನ್‌ಗಳನ್ನು ಬಳಸಿರುವುದು ಅತ್ಯಂತ ಆಘಾತಕಾರಿಯಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗಿದೆ. ಪಂಜಾಬ್ ರೈತರ ಮೇಲೆ ನಡೆಸಿರುವ ಈ ದೌರ್ಜನ್ಯವನ್ನು ಖಂಡಿಸಿ ಫೆ.16ರಂದು ದೇಶದಾದ್ಯಂತ ಪ್ರತಿಭಟನೆ, ಗ್ರಾಮೀಣ ಬಂದ್ ಮತ್ತು ಕೈಗಾರಿಕಾ/ವಲಯಗಳ ಮುಷ್ಕರವನ್ನು ಯಶಸ್ವಿಯಾಗಿ ನಡೆಸಲು ತನ್ನ ಎಲ್ಲ ಸಹಭಾಗಿ ಸಂಘಟನೆಗಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ ಎಂದು ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ದೆಹಲಿ ಚಲೋ ನಡೆಸುವ ರೈತರ ಹಕ್ಕನ್ನು ರಕ್ಷಿಸಬೇಕು, ಕೂಡಲೇ ರೈತರ ಪ್ರತಿಭಟನೆ ಹತ್ತಿಕ್ಕಲು ನಿಯೋಜಿಸಿರುವ ಎಲ್ಲ ಪಡೆಗಳನ್ನು ವಾಪಸ್ ಕರೆಸಿಕೊಳ್ಳಬೇಕು, ರೈತರ ಹಾಗೂ ಕಾರ್ಮಿಕರ ಹೋರಾಟವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಬೇಕು ಎಂದು ಪ್ರಧಾನಿಗೆ ಪತ್ರದ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ. ಸಹಮತದ ಬೇಡಿಕೆಗಳ ಆಧಾರದ ಮೇಲೆ ಒಗ್ಗಟ್ಟಿನ ಐಕ್ಯ ಹೋರಾಟ ಬೆಳೆಸಲು ಮುತುವರ್ಜಿ ವಹಿಸಬೇಕು ಎಂದು ಸಮಾನ ಮನಸ್ಕ ರೈತ ಸಂಘಟನೆಗಳಲ್ಲಿ ಎಸ್‌ಕೆಎಂ ಮನವಿ ಮಾಡಿದೆ ಎಂದು ತಿಳಿಸಿದರು.

    ಸಂಘದ ಕಾರ್ಯದರ್ಶಿ ಎನ್. ಲಿಂಗರಾಜಮೂರ್ತಿ, ಗುರುಸ್ವಾಮಿ, ಹಿಪ್ಜುಲ್ಲಾ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts