More

    ಸಂಘಟಿತರಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ

    ಹನೂರು: ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

    ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಶುಕ್ರವಾರ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಹೆಚ್ಚು ವಿಸ್ತೀರ್ಣ ಹೊಂದಿರುವ ಹನೂರು ತಾಲೂಕಿನಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದ್ದು, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಇನ್ನಿತರ ಮೂಲ ಸೌಕರ್ಯದಿಂದ ವಂಚಿತವಾಗಿವೆ. ಇದರಿಂದ ಇಲ್ಲಿನ ಜನರು ಹಲವು ದಶಕದಿಂದಲೂ ಕಷ್ಟದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ತಿಳಿದಿದ್ದರೂ ಅಗತ್ಯ ಮೂಲಸೌಕರ್ಯ ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

    ರೈತರಿಗೆ ಸರ್ಕಾರದಿಂದ ಸಮರ್ಪಕವಾಗಿ ಸವಲತ್ತುಗಳು ಸಿಗುತ್ತಿಲ್ಲ. ಇತ್ತ ಕಾಡು ಪ್ರಾಣಿಗಳ ಹಾವಳಿಯಿಂದ ಕೃಷಿಯಲ್ಲಿ ನಷ್ಟ ಅನುಭವಿಸುವಂತಾಗಿದೆ. ಆದರೆ ಪರಿಹಾರ ದೊರಕಿಸಿಕೊಡುವಲ್ಲಿ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಹಾಗೂ ಸರ್ಕಾರದ ಸವಲತ್ತು ಪಡೆಯಬೇಕಾದರೆ ಸಂಘಟನೆ ಅಗತ್ಯವಾಗಿದೆ ಎಂದರು. ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೌಡಳ್ಳಿ ಸೋಮಣ್ಣ, ಅಂಬಳೆ ಶಿವಕುಮಾರ್, ಮೈಕಲ್, ಮಲ್ಲಿಕಾರ್ಜುನಸ್ವಾಮಿ, ಸುರೇಶ್, ಸಿದ್ಧೇಶ್ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts