More

    100 ಟಿಬಿ ರೋಗಿಗಳನ್ನು ದತ್ತು ಪಡೆದ ರಾಜಭವನ; ಮಾನವೀಯ ಸೇವೆಯ ಅತ್ಯುತ್ತಮ ಕಾರ್ಯ ಜೀವ ಉಳಿಸುವುದು ಎಂದ ರಾಜ್ಯಪಾಲರು

    ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಟಿಬಿ ಮುಕ್ತ ಭಾರತಕ್ಕಾಗಿ ತಮ್ಮ ಬದ್ಧತೆಯನ್ನು ತೋರಿಸಿದ್ದು, ಇದಕ್ಕಾಗಿ ಸಾರ್ವಜನಿಕ ಸಹಭಾಗಿತ್ವಕ್ಕೆ ಕರೆ ನೀಡಿದ್ದಾರೆ. ಪ್ರಧಾನ ಮಂತ್ರಿಯವರ ಟಿಬಿ ಮುಕ್ತ ಭಾರತ ಅಭಿಯಾನವನ್ನು ಜನಾಂದೋಲನವನ್ನಾಗಿ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಹೆಲ್ತ್ ಮಿಷನ್, ಕರ್ನಾಟಕ ಟಿಬಿ ಘಟಕ ಮತ್ತು ರಾಜಭವನದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕ್ಷಯ ರೋಗಿಗಳ ದತ್ತು ಪಡೆಯುವ ಮತ್ತು ನಿಕ್ಷಯ ಮಿತ್ರ(ದಾನಿಗಳ) ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಇದನ್ನೂ ಓದಿ: ಭಾಷಣ ಮಾಡುತ್ತಿದ್ದಾಗ ಆಜಾನ್ ಕೇಳಿ ತಲೆನೋವು ಬಂತು! ವಿವಾದದ ಮಾತನ್ನು ಸಮರ್ಥಿಸುತ್ತಾ ಈಶ್ವರಪ್ಪ ಹೇಳಿದ್ದಿಷ್ಟು…

    ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಕಾರ, ಪ್ರಪಂಚದ ಅನೇಕ ದೇಶಗಳು 2030ರ ವೇಳೆಗೆ ಟಿಬಿಯನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿವೆ. 2025 ರ ವೇಳೆಗೆ ಭಾರತವನ್ನು ಟಿಬಿ ಮುಕ್ತ ಮಾಡುವ ಗುರಿಯನ್ನು ಭಾರತದ ಪ್ರಧಾನಿ ಹೊಂದಿದ್ದಾರೆ. 2025 ರ ವೇಳೆಗೆ ಟಿಬಿಯನ್ನು ತೊಡೆದುಹಾಕಲು ರಾಷ್ಟ್ರೀಯ ಕರೆಗೆ ಅನುಗುಣವಾಗಿ, ರಾಜ್ಯವು “ಕ್ಷಯ ಮುಕ್ತ ಕರ್ನಾಟಕ – 2025” ಗಾಗಿ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದರು.

    ‘ನಿ-ಕ್ಷಯ 2.0’ ಪೋರ್ಟಲ್ ಮೂಲಕ ಟಿಬಿ ರೋಗಿಗಳಿಗೆ ಸಮುದಾಯದ ಸಹಭಾಗಿತ್ವವನ್ನು ಒದಗಿಸುವ ಉಪಕ್ರಮವು ಶ್ಲಾಘನೀಯವಾಗಿದೆ. ಈ ಪೋರ್ಟಲ್‌ನಲ್ಲಿ ಸುಮಾರು 13.5 ಲಕ್ಷ ಕ್ಷಯ ರೋಗಿಗಳು ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 89 ಲಕ್ಷ ಸಕ್ರೀಯ ಟಿಬಿ ರೋಗಿಗಳು ದತ್ತು ತೆಗೆದುಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ನಿ-ಕ್ಷಯ ಡಿಜಿಟಲ್ ಪೋರ್ಟಲ್ ಟಿಬಿಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸಮುದಾಯ ಬೆಂಬಲಕ್ಕಾಗಿ ವೇದಿಕೆಯನ್ನು ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು.

    ಇದನ್ನೂ ಓದಿ: ದಶಪಥ ಹೆದ್ದಾರಿ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಬೇಕೆಂಬ ಕನಿಷ್ಟ ಸೌಜನ್ಯವೂ ಇಲ್ಲ; ಆಕ್ರೋಶ ವ್ಯಕ್ತಪಡಿಸಿದ ಡಿ.ಕೆ.ಸುರೇಶ್

    ಎಲ್ಲಾ ನಾಗರಿಕರು, ಎನ್‌ಜಿಒಗಳು, ಕಾರ್ಪೊರೇಟ್ ಸಂಸ್ಥೆಗಳು, ಚುನಾಯಿತ ಪ್ರತಿನಿಧಿಗಳು ಮುಂತಾದವರು ನಿ-ಕ್ಷಯ ಮಿತ್ರರಾಗುವ ಮೂಲಕ ಟಿಬಿ ಮುಕ್ತ ಭಾರತ ಅಭಿಯಾನವನ್ನು ಬೆಂಬಲಿಸಬೇಕು. ಒಬ್ಬರ ಜೀವವನ್ನು ಉಳಿಸುವ ಕಾರ್ಯವು ಮಾನವೀಯ ಸೇವೆಯ ಅತ್ಯುತ್ತಮ ಕಾರ್ಯವಾಗಿದೆ ಎಂದು ಹೇಳಿದರು.

    ಒಂದು ಅಭಿಯಾನದೊಂದಿಗೆ ಸಾರ್ವಜನಿಕರ ವೈಯಕ್ತಿಕ ಮತ್ತು ಸಾಮೂಹಿಕ ಒಡನಾಟ ಇದ್ದಾಗ, ಆ ಅಭಿಯಾನದ ಯಶಸ್ಸಿನ ಸಾಧ್ಯತೆಗಳು ಸಹ ಹೆಚ್ಚಾಗುತ್ತವೆ. ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣಾ ಯೋಜನೆಯಾದ ‘ಆಯುಷ್ಮಾನ್ ಭಾರತ್’ ಅಡಿಯಲ್ಲಿ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಟಿಬಿಗೆ ಸಂಬಂಧಿಸಿದ ಸೇವೆಗಳಲ್ಲಿ ನಿರಂತರ ಹೆಚ್ಚಳ ಕಂಡು ಬಂದಿದೆ. ರಾಜ್ಯ ಸರಕಾರದ ಪ್ರಯತ್ನದ ಫಲವಾಗಿ ಟಿಬಿ ಬಾಧೆ ಕಡಿಮೆಯಾಗಿದೆ. ಇದಕ್ಕಾಗಿ ಸಚಿವರು ಹಾಗೂ ಅಧಿಕಾರಿಗಳು ಹಾಗೂ ನೌಕರರನ್ನು ಅಭಿನಂದಿಸುತ್ತೇನೆ ಎಂದರು.

    ಕರ್ನಾಟಕ ರಾಜ್ಯದಲ್ಲಿ ಗುರುತಿಸಲಾದ 39745 ಟಿಬಿ ರೋಗಿಗಳಲ್ಲಿ 25895 ರೋಗಿಗಳು ಪೋಶನ್ ಆಧಾರ್‌ಗೆ ಒಪ್ಪಿಗೆ ನೀಡಿದ್ದಾರೆ. ಅವರಲ್ಲಿ 25110 ರೋಗಿಗಳನ್ನು ಅನೇಕ ಸಾಮಾಜಿಕ ಸಂಸ್ಥೆಗಳು, ಸಾರ್ವಜನಿಕ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಂದ ದತ್ತು ಪಡೆದಿದ್ದಾರೆ. ಈ ಅನುಕ್ರಮದಲ್ಲಿ, 100 ಟಿಬಿ ರೋಗಿಗಳನ್ನು ರಾಜಭವನದಿಂದ ದತ್ತು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಇದನ್ನೂ ಓದಿ: ಉರಿಗೌಡ – ದೊಡ್ಡ ನಂಜೇಗೌಡರ ಹೆಸರಿನ ತಾತ್ಕಾಲಿಕ ದ್ವಾರ ತೆರವುಗೊಳಿಸಿದ್ರೆ ಏನಾಯ್ತು? ನಾವು ಶಾಶ್ವತ ದ್ವಾರ ನಿರ್ಮಾಣ ಮಾಡ್ತೇವೆ; ಸಿ.ಟಿ.ರವಿ

    ಕಾರ್ಯಕ್ರಮದಲ್ಲಿ ಟಿಬಿ ರೋಗಿಗಳನ್ನು ದತ್ತು ಪಡೆದ ಸಂಸದರಾದ ಲೆಹರ್ ಸಿಂಗ್ ಸಿರೋಯಾ, ಸಚಿವರಾದ ಗೋಪಾಲಯ್ಯ ಅವರ ಪತ್ನಿ ಎಸ್.ಪಿ. ಹೆಮಲತಾ ಗೋಪಾಲಯ್ಯ, ಮಂಡ್ಯ ಮಿಲ್ಕ್ ಯೂನಿಯನ್ ಲಿಮಿಟೆಡ್ ನ ಎಂಡಿ ಡಾ.ಪಿ ಆರ್ ಮಂಜೇಶ್, ಟಾಟಾ ಮೆಡಿಕಲ್ ಮತ್ತು ಡಯಾಗ್ನೋಸ್ಟಿಕ್ ನ ಗಿರೀಶ್ ಕೃಷ್ಣಮೂರ್ತಿ, ಡಾ.ಫಾರೂಖ್ ಅಹಮದ್ ಮನುರ್, ಜೀವಿತ್ ಎಂಟರ್ ಪ್ರೈಸಸ್, ಪವನ್ ರಂಖ, ಎನ್ ರಾಘವನ್, ರೋಟರಿ ಡಿಸ್ಟ್ರಿಕ್ಟ್ 3190, ಸೇರಿದಂತೆ ಮುಂತಾದವರನ್ನು ಸನ್ಮಾನಿಸಲಾಯಿತು.

    ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ ಅವರು 500 ಟಿಬಿ ರೋಗಿಗಳನ್ನು ದತ್ತು ಪಡೆದು, ಕಾರ್ಯಕ್ರಮ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಅನಿಲ್ ಕುಮಾರ್ ಟಿ.ಕೆ ಸರ್ಕಾರದ ಪ್ರಧಾನ ​ಕಾರ್ಯದರ್ಶಿಗಳು, ಆ​ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಡಾ. ನವೀನ್ ಭಟ್.ವೈ, ಅವರು ಗಣ್ಯರನ್ನು ಸ್ವಾಗತಿಸಿದರು.

    ಇದನ್ನೂ ಓದಿ: ಪ್ರಧಾನಿಗೆ ಫೈಟರ್ ರವಿ ಯಾರೆಂಬುದೇ ಗೊತ್ತಿಲ್ಲ… ಕಾಂಗ್ರೆಸ್​ನವರು ಟ್ರೋಲ್ ಮಾಡುವ ಅಗತ್ಯವಿಲ್ಲ; ಶೋಭಾ ಕರಂದ್ಲಾಜೆ ನೀಡಿದ ಸ್ಪಷ್ಟನೆ ಹೀಗಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts