More

    ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ: ಅಮಿತ್​ ಶಾ ಭೇಟಿಯಾದ ರಾಜ್​ ಠಾಕ್ರೆ!

    ಮಹಾರಾಷ್ಟ್ರ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ದೇಶದೆಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ. ಇದರ ಬೆನ್ನೆಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್​ ಠಾಕ್ರೆ ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾಗಿ ಸುಮಾರು ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.

    ಇದನ್ನೂ ಓದಿ: ಜಾರ್ಖಂಡ್​: ಜೆಎಂಎಂ ತೊರೆದು ಬಿಜೆಪಿ ಸೇರ್ಪಡೆಯಾದ ಹೇಮಂತ್ ಸೊರೇನ್‌ ಸೊಸೆ ಸೀತಾ ಸೊರೆನ್! 

    ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಲಗೊಳ್ಳಲಿದೆ. ರಾಜ್ ಠಾಕ್ರೆ ಅವರ ಪಕ್ಷ ಎಂಎನ್‌ಎಸ್ ಎನ್‌ಡಿಎ ಸೇರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದರು.

    ಲೋಕಸಭೆ ಚುನಾವಣೆ ಮತ್ತು ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಕುರಿತು ಗೃಹ ಸಚಿವ ಅಮಿತ್ ಶಾ ಅವರು ಅಮಿತ್ ಠಾಕ್ರೆ ಜೊತೆ ಮಹತ್ವದ ವಿಷಯವನ್ನು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ದೆಹಲಿಗೆ ಬರುವಂತೆ ಕರೆದಿದ್ದರು. ಅದಕ್ಕೇ ಬಂದಿದ್ದೇನೆ. ಏನಾಗುತ್ತದೆ ಎಂದು ನೋಡೋಣ ಎಂದು ರಾಜ್ ಠಾಕ್ರೆ ಸೋಮವಾರ ರಾತ್ರಿ ನವದೆಹಲಿಯನ್ನು ತಲುಪಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದರು. ಈ ಸಮಯದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಕೂಡ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಳಿದಿದ್ದಾರೆ ಎನ್ನಲಾಗಿದೆ.

    ಎರಡು ಸ್ಥಾನಗಳಿಗೆ ಬೇಡಿಕೆ: ಕಳೆದ ನಾಲ್ಕು ದಿನಗಳಲ್ಲಿ ದೆಹಲಿಗೆ ಠಾಕ್ರೆ ಅವರ ಎರಡನೇ ಭೇಟಿ ಇದಾಗಿದೆ. ಏಕನಾಥ್ ಶಿಂಧೆಯವರ ಶಿವಸೇನೆಗೆ ಬಿಜೆಪಿ ನಿರೀಕ್ಷಿಸಿದಷ್ಟು ಬೆಂಬಲ ಸಿಗುತ್ತಿಲ್ಲ. ರಾಜ್ ಠಾಕ್ರೆ ಅವರ ಪಕ್ಷವು ಮುಂಬೈ, ಕೊಂಕಣ, ಪುಣೆ, ನಾಸಿಕ್‌ನಂತಹ ಪ್ರದೇಶಗಳಲ್ಲಿ ಪ್ರಬಲವಾಗಿದ್ದು ಎನ್‌ಡಿಎ ಲಾಭವಾಗಬಹುದು ಎನ್ನುವ ಭರವಸೆ ಇದೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್​ ಠಾಕ್ರೆ ಅವರು ದಕ್ಷಿಣ ಮುಂಬೈ ಮತ್ತು ಶಿರಡಿ ಲೋಕಸಭಾ ಸ್ಥಾನಗಳಿಗೆ ಬೇಡಿಕೆ ಇಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ರಾಜ್ ಠಾಕ್ರೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರ ದೂರದ ಸೋದರಸಂಬಂಧಿ. ರಾಜ್ ಠಾಕ್ರೆ ಅವರು ಶಿವಸೇನೆಯ ದಿವಂಗತ ಸಂಸ್ಥಾಪಕ ಉದ್ಧವ್ ಅವರ ತಂದೆ ಬಾಳ್ ಠಾಕ್ರೆ ಅವರ ಸೋದರಳಿಯ. ಶಿವಸೇನೆಯ ಇನ್ನೊಂದು ಬಣವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಜನವರಿಯಲ್ಲಿ ತೀರ್ಪು ನೀಡಿದ್ದರು.

    2022 ರಲ್ಲಿ ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ನಂತರ ಶಿವಸೇನೆ ಎರಡು ಬಣಗಳಾಗಿ ವಿಭಜನೆಯಾದ ನಂತರ ಏಕನಾಥ್ ಶಿಂಧೆಮಹಾರಾಷ್ಟ್ರದ ಮುಖ್ಯಮಂತ್ರಿಯಾದರು.

    ಆರ್‌ಸಿಬಿ VS ಸಿಎಸ್​ಕೆ ಮ್ಯಾಚ್ ಟಿಕೆಟ್‌ ಕೊಡಿಸಿ: ವಿನಮ್ರವಾಗಿ ಮನವಿ ಮಾಡಿದ ಟೀಂ ಇಂಡಿಯಾ ಸ್ಟಾರ್​ ಆಟಗಾರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts