ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ ನಿಧನ

Raja
Published on

ರಾಯಚೂರು: ಅನಾರೋಗದಿಂದ ಬಳಲುತ್ತಿದ್ದ ರಾಯಚೂರಿನ ಮಾಜಿ ಸಂಸದ ರಾಜಾರಂಗಪ್ಪ ನಾಯಕ (61) ಅವರು ಭಾನುವಾರ ರಾತ್ರಿ ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್​ನಲ್ಲಿ ನಿಧನ ಹೊಂದಿದರು.

1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಅನಾರೋಗ್ಯದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದು, ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನೇರವೇರಲಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net