
ರಾಜಾಜಿನಗರ : ಕಾಂಗ್ರೆಸ್ ಸರ್ಕಾರದ 5ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ಮತ್ತು ಗುರುತಿನ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
ಸಭೆಯಲ್ಲಿ ಮಾತನಾಡಿದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಅಧ್ಯಕ್ಷ ಎನ್.ವೆಂಕಟೇಶ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ, ಮಹಿಳಾ ನಿಗಮ ಮಂಡಳಿ ಅಧ್ಯಕ್ಷರಾದ ಜಿ.ಪದ್ಮಾವತಿಯವರ ಮಾರ್ಗದರ್ಶನದಲ್ಲಿ ಸಭೆ ಆಯೋಜಿಸಲಾಗಿದೆ. ನ್ಯಾಯ ಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ತೆಗೆಯವ, ಮುಚ್ಚುವ ವೇಳೆ ಹಾಗೂ ತೂಕದ ಮಾಪನ ಪರೀಕ್ಷೆ, ಎಷ್ಟು ಜನ ಫಲಾನುಭವಿಗಳಿದ್ದಾರೆ ಎಂದು ಪರಿಶೀಲನೆ ಮಾಡಬೇಕು ಎಂದು ಸದಸ್ಯರಿಗೆ ಹೇಳಿದರು.
ಗೃಹಲಕ್ಷ್ಮಿ ಯೋಜನೆಗಳ ಫಲಾನುಭವಿ ಮಹಿಳೆಯರು ಎಷ್ಟಿದ್ದಾರೆ ? ಹೆಚ್ಚಾಗಿದ್ದರೆ ಅದರ ಪರಿಶೀಲನೆ ಮಾಡುವುದು, ಯುವನಿಧಿ ಫಲಾನುಭವಿಗಳ ಪಟ್ಟಿ ಮತ್ತು ಕೌಶಲಾಭಿವೃದ್ದಿ ಪಡೆದವರ ಮಾಹಿತಿ ಪಡೆಯುವುದರೊಂದಿಗೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳು ಪ್ರತಿ ಕುಟುಂಬಗಳಿಗೆ ತಲುಪಿಸುವ ಜವಾಬ್ಬಾರಿ ನಮ್ಮ ಮೇಲಿದೆ ಎಂದು ಹೇಳಿದರು.
ಸಭೆಯಲ್ಲಿ ಕಂದಾಯಾಧಿಕಾರಿ ಬಸವರಾಜ್ ಹಾಗೂ ಗ್ಯಾರಂಟಿ ಸಮಿತಿ ಸದಸ್ಯರುಗಳು ಪಾಲ್ಗೊಂಡಿದ್ದರು.
ಸರ್ಕಾರದ ಹೊಸ ಜಾತಿ ಜನಗಣತಿ ನಿರ್ಧಾರಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳ ಸ್ವಾಗತ