ಖ್ಯಾತ ಹಿರಿಯ ಸಂಗೀತ ನಿರ್ದೇಶಕ ರಾಜನ್​ ವಿಧಿವಶ

ಬೆಂಗಳೂರು: ಕನ್ನಡದ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ತುಳು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿ ಮನೆ ಮಾತಾಗಿದ್ದ ಖ್ಯಾತ ಸಂಗೀತ ನಿರ್ದೇಶಕ ರಾಜನ್​ (87) ಅವರು ಭಾನುವಾರ ರಾತ್ರಿ 10.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜನ್​ ಅವರು ಹೃದಯಾಘಾತದಿಂದ ಮನೆಯಲ್ಲೇ ನಿಧನರಾದರು. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಅವರ ಅಂತ್ಯಸಂಸ್ಕಾರ ಇಂದು ಸಂಜೆ ಹೆಬ್ಬಾಳದ ಸ್ಮಶಾನದಲ್ಲಿ ನೆರವೇರಲಿದೆ. ರಾಜನ್​ ಅವರು ಮೂಲತಃ ಮೈಸೂರಿನವರು. ಸಹೋದರ ನಾಗೇಂದ್ರ ಜತೆ ಸಂಗೀತ ಸಂಯೋಜನೆ ಮಾಡುತ್ತಿದ್ದರಿಂದ … Continue reading ಖ್ಯಾತ ಹಿರಿಯ ಸಂಗೀತ ನಿರ್ದೇಶಕ ರಾಜನ್​ ವಿಧಿವಶ