ರಜನಿಕಾಂತ್ – ಶಿವಣ್ಣ ಅಭಿನಯದ ‘ಜೈಲರ್​’ ಬಿಡುಗಡೆಗೆ ಮುಹೂರ್ತ ಫಿಕ್ಸ್!

ಚೆನ್ನೈ:ಕಾಲಿವುಡ್​ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕರುನಾಡ ಚಕ್ರವರ್ತಿ ಶಿವಣ್ಣ ಅಭಿನಯದ ಜೈಲರ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ಟ್ವಿಟ್ ಮಾಡಿರುವ ಚಿತ್ರದ ನಿರ್ದೇಶಕ ನೆಲ್ಸನ್ ದಿಲೀಪ್, ಸಿನಿಮಾ ಕುರಿತಾದ ಮಾಹಿತಿಯನ್ನು ನೀಡುವುದರ ಜೊತೆಗೆ 47 ಸೆಕೆಂಡುಗಳ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಆಗಸ್ಟ್ 10ರಂದು ಬಿಡುಗಡೆಯಾಗಲಿದ್ದು, ಅಭಿಮಾನಿಗಳಿಗೆ ರಸದೌತಣ ನೀಡುವ ನಿರೀಕ್ಷೆಯಿದೆ. ವಿಡಿಯೋ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಉತ್ತಮ ರೆಸ್ಪಾನ್ಸ್ ಬಂದಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದನ್ನೂ ಓದಿ: … Continue reading ರಜನಿಕಾಂತ್ – ಶಿವಣ್ಣ ಅಭಿನಯದ ‘ಜೈಲರ್​’ ಬಿಡುಗಡೆಗೆ ಮುಹೂರ್ತ ಫಿಕ್ಸ್!