ರಾಜಣ್ಣ ಹೇಳಿಕೆ ನಿರ್ಲಕ್ಷಿಸುವುದು ಒಳ್ಳೆಯದು; ಪಕ್ಷದಲ್ಲಿ ಆಂತರಿಕ ಜಗಳವಿಲ್ಲ : CM ಸಿದ್ದರಾಮಯ್ಯ

dk - 2025-06-27T165220.479
Published on

ಬೆಂಗಳೂರು: ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ(CM) ಸಿದ್ದರಾಮಯ್ಯ, ಸಚಿವ ಕೆ.ಎನ್.ರಾಜಣ್ಣ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.

ಇದನ್ನೂ ಓದಿ:10 ಅಡಿ ಗುಂಡಿ, ಸುಳ್ಳಿನ ಕಂತೆ; ಹತ್ಯೆಗೂ ಮುನ್ನ ಅತ್ಯಾಚಾರ! ಕಡೆಗೂ ನೀಚ ಮಾವನಿಂದ ಸತ್ಯ ಕಕ್ಕಿಸಿದ ಖಾಕಿ | Murder Case ಹೇಳಿಕೆ ನಿರ್ಲಕ್ಷಿಸಿ ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದರು.

ಸರ್ಕಾರ ಬೆಂಗಳೂರು ಅಭಿವೃದ್ಧಿಗೊಳಿಸಲಿದೆ

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು

ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net