More

    ಸಿಎಂ ಆದ ಮರುದಿನವೇ ಮಹತ್ವದ ಘೋಷಣೆ; ಜನಸೇವೆಯೇ ನಮ್ಮ ಆದ್ಯತೆ ಎಂದ ಭಜನ್​ಲಾಲ್​ ಶರ್ಮಾ

    ಜೈಪುರ: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ರಾಜಸ್ಥಾನ ಬಿಜೆಪಿ ಸರ್ಕಾರವು ಶನಿವಾರ ಮಹತ್ವದ ಘೋಷಣೆಗಳನ್ನು ಮಾಡಿದೆ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪೇಪರ್​ ಲೀಕ್​ ಹಗರಣದ ತನಿಖೆಯನ್ನು ಸರ್ಕಾರ ವಿಶೇಷ ತನಿಖಾ ದಳ (SIT)ಗೆ ವಹಿಸಿದೆ.

    ಶುಕ್ರವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭಜನ್​ಲಾಲ್​ಶರ್ಮಾ ಶನಿವಾರ ಸುದ್ದಿಗೋಷ್ಠಿಯನ್ನು ಕರೆದು ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪೇಪರ್​ ಲೀಕ್​ ಹಗರಣದ ತನಿಖೆಗೆ ವಿಶೇಷ ತನಿಖಾ ದಳ (SIT)ಕ್ಕೆ ವಹಿಸುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ಫ್ಯಾನ್ಸ್​ ಖುಷಿಯಾಗಿರಬೇಕು; ಎಬಿಡಿ ಹೀಗೆ ಹೇಳಿದ್ಯಾಕೆ

    ಯುವಕರ ಭವಿಷ್ಯದೊಂದಿಗೆ ಆಟವಾಡಿದ ಯಾರೊಬ್ಬರನ್ನು ಸುಮ್ಮನೆ ಬಿಡುವ ಮಾತಿಲ್ಲ. ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಪೇಪರ್​ ಲೀಕ್​ ಹಗರಣ ಆಗದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗುವುದು. ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸರ್ಕಾರ ಶೂನ್ಯ ಸಹಿಷ್ಣುತೆಯನ್ನು ಹೊಂದಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಮಹಿಳೆಯರ ಸುರಕ್ಷತೆ ಮತ್ತು ಭ್ರಷ್ಟಾಚಾರ ನಿರ್ಮೂಲನೆ ನಮ್ಮ ಮೊದಲ ಆದ್ಯತೆಯಾಗಿದೆ.

    ರಾಜಸ್ಥಾನದಲ್ಲಿ ಹೆಚ್ಚುತ್ತಿರುವ ಸಂಘಟಿತ ಅಪರಾಧ ಪ್ರಕರಣಗಳನ್ನು ತಡೆಯಲು ಎಡಿಜಿಪಿ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ಒಂದನ್ನು ರಚಿಸಲಾಗುವುದು. ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಮೇಲ್ವಿಚಾರಣಾ ಸಮಿತಿ ರಚಿಸಲಾಗುವುದು. ಈ ಮೇಲ್ವಿಚಾರಣಾ ಸಮಿತಿಯು ಯಾವುದೇ ಅರ್ಹ ವ್ಯಕ್ತಿ ಕೇಂದ್ರ ಸರ್ಕಾರ ಮತ್ತು ರಾಜಸ್ಥಾನ ಸರ್ಕಾರದ ಸಾರ್ವಜನಿಕ ಕಲ್ಯಾಣ ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳುತ್ತದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಭಜನ್​ ಲಾಲ್​ ಶರ್ಮಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts