More

    ರಾಜಸ್ಥಾನ ರಾಯಲ್ಸ್ ದಾಖಲೆ ಚೇಸಿಂಗ್, ಪಂಜಾಬ್‌ಗೆ ನಿರಾಸೆ

    ಶಾರ್ಜಾ: ಅಂತಿಮ ಕ್ಷಣದವರೆಗೂ ಕುತೂಹಲ ಕೆರಳಿಸಿದ್ದ ಹೋರಾಟದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಮೊತ್ತದ ರನ್ ಬೆನ್ನಟ್ಟಿದ ದಾಖಲೆಯೊಂದಿಗೆ ರೋಚಕ ಗೆಲುವು ದಾಖಲಿಸಿತು. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್-13 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ (85 ರನ್, 42 ಎಸೆತ, 4 ಬೌಂಡರಿ, 7 ಸಿಕ್ಸರ್), ನಾಯಕ ಸ್ಟೀವನ್ ಸ್ಮಿತ್ (50 ರನ್,27 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ರಾಹುಲ್ ತೆವಾಟಿಯಾ (53 ರನ್, 31 ಎಸೆತ, 7 ಸಿಕ್ಸರ್) ಅಬ್ಬರದ ಬ್ಯಾಟಿಂಗ್ ಲವಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ಮಯಾಂಕ್ ಅಗರ್ವಾಲ್ (106 ರನ್, 50 ಎಸೆತ, 10 ಬೌಂಡರಿ, 7 ಸಿಕ್ಸರ್) ಚೊಚ್ಚಲ ಶತಕದಾಟ ಹಾಗೂ ನಾಯಕ ಕೆಎಲ್ ರಾಹುಲ್ (69 ರನ್, 54 ಎಸೆತ, 7 ಬೌಂಡರಿ, 1 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್‌ಗೆ 223 ರನ್ ಪೇರಿಸಿತು. ಪ್ರತಿಯಾಗಿ ರಾಜಸ್ಥಾನ ರಾಯಲ್ಸ್ ತಂಡ 19.3 ಓವರ್‌ಗಳಲ್ಲಿ 6 ವಿಕೆಟ್‌ಗೆ 226 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದು ರಾಯಲ್ಸ್‌ಗೆ ಟೂರ್ನಿಯಲ್ಲಿ ಸತತ 2ನೇ ಗೆಲುವಾಗಿದೆ.

    ಅಂತಾರಾಷ್ಟ್ರೀಯ ಹಾಕಿ ಆಟಗಾರ ಎಸ್. ಕೆ. ಉತ್ತಪ್ಪ ವಿವಾಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts