More

    IND vs ENG: ಎರಡು ಟೆಸ್ಟ್​ ಪಂದ್ಯಗಳಿಗೆ ಆರ್‌ಸಿಬಿ ಈ ಸ್ಟಾರ್ ಆಟಗಾರ ಆಯ್ಕೆ

    ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಆರ್‌ಸಿಬಿ ಆಟಗಾರ ರಜತ್ ಪಾಟೀದಾರ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

    ಇದನ್ನೂ ಓದಿ:ಮೆಲ್ಬೋರ್ನ್‌ನಲ್ಲಿ ಜೋಕೋ ಗೆಲುವಿನ ಓಟ: ಸೆಮಿಫೈನಲ್‌ಗೇರಿದ ಹಾಲಿ ಚಾಂಪಿಯನ್ ಸಬಲೆಂಕಾ, ಗೌಫ್

    ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿರುವ ರಜತ್ ಪ್ರಸ್ತುತ ಭಾರತ ಎ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಸ್ಥಾನದಲ್ಲಿ ಚೊಚ್ಚಲ ಬಾರಿಗೆ ಭಾರತ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ವಿರಾಟ್ ಕೊಹ್ಲಿ ಅವರ ಬದಲಿ ಆಟಗಾರನ ಯಾರು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದೆ.

    IND vs ENG: ಎರಡು ಟೆಸ್ಟ್​ ಪಂದ್ಯಗಳಿಗೆ ಆರ್‌ಸಿಬಿ ಈ ಸ್ಟಾರ್ ಆಟಗಾರ ಆಯ್ಕೆ

    ವೈಯಕ್ತಿಕ ಕಾರಣಗಳಿಂದ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಮೊದಲ ಎರಡು ಟೆಸ್ಟ್​ ಪಂದ್ಯಗಳಿಂದ ವಿರಾಟ್​ ಕೊಹ್ಲಿ ಹೊರಗುಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಅಧಿಕೃತ ಹೇಳಿಕೆಯಲ್ಲಿ ಶೀಘ್ರದಲ್ಲೇ ಬದಲಿ ಆಟಗಾರನನ್ನು ಹೆಸರಿಸುವ ಬಗ್ಗೆ ಉಲ್ಲೇಖಿಸಿತ್ತು. ಅನುಭವಿ ಚೇತೇಶ್ವರ ಪೂಜಾರ, ಯುವ ಆಟಗಾರರಾದ ರಜತ್ ಪಾಟೀದಾರ್, ಸರ್ಫರಾಜ್ ಖಾನ್ ಮತ್ತು ರಿಂಕು ಸಿಂಗ್ ನಡುವೆ ಆಯ್ಕೆಗೆ ಪೈಪೋಟಿ ಇತ್ತು. ಆದರೆ ಮಂಗಳವಾರ ರಾತ್ರಿ ಪಾಟೀದಾರ್ ಈ ರೇಸ್‌ನಲ್ಲಿ ಗೆದ್ದಿರುವುದು ಸ್ಪಷ್ಟವಾಗಿದೆ.

    ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ‘ಎ’ ಪಂದ್ಯದಲ್ಲಿ ರಜತ್ ಪಾಟಿದಾರ್ 151 ರನ್ ಬಾರಿಸಿ ಮಿಂಚಿದ್ದರು. ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಫಲವಾಗಿ ಇದೀಗ ಟೀಮ್ ಇಂಡಿಯಾಗೆ ಅಯ್ಕೆಯಾಗಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್​ ಪಂದ್ಯಗಳಲ್ಲಿ ರಜತ್ ಟೀಮ್ ಇಂಡಿಯಾದಲ್ಲಿ ಆಡಲಿದ್ದಾರೆ.

    ಸದ್ಯ ತಂಡಕ್ಕೆ ಆಯ್ಕೆಯಾದರೂ, ಆರ್‌ಸಿಬಿ ಆಟಗಾರ ರಜಿತ್​ ಆಡುವ 11 ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇಲ್ಲ. ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಾಗಿದ್ದಾರೆ.

    ಬಿಸಿಸಿಐ ಆಯ್ಕೆ ಸಮಿತಿ ಮತ್ತು ಟೀಮ್ ಮ್ಯಾನೇಜ್‌ಮೆಂಟ್, ಸರ್ವಾನುಮತದಿಂದ ಪಾಟೀದರ್‌ ಅವರನ್ನು ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ರಜತ್ ಒಟ್ಟು 93 ಇನಿಂಗ್ಸ್​ಗಳನ್ನು ಆಡಿದ್ದಾರೆ. ಈ ವೇಳೆ 12 ಶತಕ ಹಾಗೂ 22 ಅರ್ಧಶತಕಗಳೊಂದಿಗೆ 4000 ರನ್ ಕಲೆಹಾಕಿದ್ದಾರೆ. ಅಂದರೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಪಾಟಿದಾರ್ 45.97 ಸರಾಸರಿಯಲ್ಲಿ ರನ್ ಗಳಿಸಿದ್ದಾರೆ.

    ಟೆಸ್ಟ್ ಸರಣಿಗೆ ಉಭಯ ತಂಡಗಳು :
    ಭಾರತ ಟೆಸ್ಟ್ ತಂಡ (ಮೊದಲ ಎರಡು ಪಂದ್ಯಗಳಿಗೆ): ರೋಹಿತ್ ಶರ್ಮಾ (ನಾಯಕ ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟಿದಾರ್, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಶಿಖರ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಅವೇಶ್ ಖಾನ್.

    ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್, ಜಾನಿ ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್, ಬೈರ್‌ಸ್ಟೋವ್, ಶೋಯೆಬ್ ಬಶೀರ್, ಡ್ಯಾನ್ ಲಾರೆನ್ಸ್, ಝಾಕ್ ಕ್ರಾಲಿ.

    ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
    ಜನವರಿ 25 ರಿಂದ 29- ಮೊದಲ ಟೆಸ್ಟ್ (ಹೈದರಾಬಾದ್)
    ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ (ವಿಶಾಖಪಟ್ಟಣಂ)
    ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ (ರಾಜ್​ಕೋಟ್)
    ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ (ರಾಂಚಿ)
    ಮಾರ್ಚ್ 7 ರಿಂದ 11- ಐದನೇ ಟೆಸ್ಟ್ (ಧರ್ಮಶಾಲಾ)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts