More

    ರಾಮನಗರದ ಜಾನಪದ ಲೋಕಕ್ಕೆ ರಜತಸಂಭ್ರಮ

    ಬೆಂಗಳೂರು: ನಾಡೋಜ ಎಚ್.ಎಲ್. ನಾಗೇಗೌಡರ ಕನಸನ್ನು ನನಸು ಮಾಡುತ್ತಿರುವ ರಾಮನಗರದ ಜಾನಪದ ಲೋಕಕ್ಕೆ ಇದೀಗ ಬೆಳ್ಳಿಹಬ್ಬದ ಸಂಭ್ರಮ. ಇದರ ಭಾಗವಾಗಿ ಬೆಂಗಳೂರಿನಲ್ಲಿ ಒಂದು ದಿನ, ರಾಮನಗರದ ಜಾನಪದ ಲೋಕದಲ್ಲಿ ಎರಡು ದಿನ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ಬುಧವಾರ ‘ಜಾನಪದ ಲೋಕ ಬೆಳ್ಳಿ ಹಬ್ಬ’ ಲಾಂಛನ ಬಿಡá-ಗಡೆ ಮಾಡಿ ಮಾತನಾಡಿದರು. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಬೆಳ್ಳಿಹಬ್ಬದ ಕಾರ್ಯಕ್ರಮ ಏರ್ಪಡಿಸಿವೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಫೆ.16ರಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಏರ್ಪಡಿಸಿರುವ ಕಾರ್ಯಕ್ರಮವನ್ನು ಯಡಿಯೂರಪ್ಪ ಉದ್ಘಾಟಿಸುವರು.

    ಜಾನಪದ ಲೋಕದ ಪ್ರಕಟಣೆಗಳು ಸಮಾರಂಭದಲ್ಲಿ ಬಿಡá-ಗಡೆಯಾಗಲಿವೆ . ರಾಮನಗರದ ಜಾನಪದ ಲೋಕದಲ್ಲಿ 17ರಂದು ‘ಜಾನಪದ ಲೋಕೋತ್ಸವ’ವನ್ನು ಹಿರಿಯ ಸಂಶೋಧಕ ಪ್ರೊ. ಹಂಪ ನಾಗರಾಜಯ್ಯ ಉದ್ಘಾಟಿಸುವರು ಎಂದು ಸಚಿವರು ತಿಳಿಸಿದರು.

    ಜನಪದ ವಿಭಾಗಕ್ಕೆ ಆದ್ಯತೆ

    ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಾಹಿತಿ, ಕಲಾವಿದರು, ಸಾಂಸ್ಕೃತಿಕ ಲೋಕದ ದಿಗ್ಗಜರೊಂದಿಗೆ ಮಂಗಳವಾರ ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ಜನಪದ ವಿಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅನುದಾನ ಹೆಚ್ಚಳ, ಬೆಂಗಳೂರಿನಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ಹೆಚ್ಚುವರಿ ರಂಗಮಂದಿರಗಳ ನಿರ್ವಣಕ್ಕೆ ಬಜೆಟ್​ನಲ್ಲಿ ಹಣ ಮೀಸಲಿರಿಸಲು ಯಡಿಯೂರಪ್ಪ ಸಮ್ಮತಿಸಿದ್ದಾರೆ ಎಂದು ಸಿ.ಟಿ. ರವಿ ತಿಳಿಸಿದರು.

    ಕಲಾವಿದರು ಭಾಗಿ

    ರವೀಂದ್ರ ಕ್ಷೇತ್ರದಲ್ಲಿ ಜಾನಪದ ಲೋಕ ಜತೆಗೆ ವಿವಿಧ ಜಾನಪದ ಕಲೆಗಳ ಪ್ರದರ್ಶನ, ಪ್ರಾತ್ಯಕ್ಷಿಕೆಗಳು ನಡೆಯಲಿವೆ. ಜಾನಪದ ಕಲಾವಿದರು ತಮ್ಮ ಕಲಾ ನೈಪುಣ್ಯ ಪ್ರಸ್ತುತಪಡಿಸಲಿದ್ದಾರೆೆ. ಸಂಜೆ ಬೃಹತ್ ಮೆರವಣಿಗೆ ಆಯೋಜಿಸ ಲಾಗಿದ್ದು, ವಿವಿಧ ರಾಜ್ಯಗಳ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಜಾನಪದ ಲೋಕದ ವೇದಿಕೆಯಲ್ಲಿ ವಿವಿಧ ಕಾರ್ಯಕ್ರಮ ನಡೆಯಲಿವೆ ಎಂದು ಪರಿಷತ್ ಅಧ್ಯಕ್ಷ ಟಿ. ತಿಮ್ಮೇಗೌಡ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts