ಸೂಪರ್​ಸ್ಟಾರ್​ ರಜಿನಿಕಾಂತ್​ ಆಸ್ಪತ್ರೆಗೆ ದಾಖಲು

ಚೆನ್ನೈ: ರಕ್ತದೊತ್ತಡದಲ್ಲಿ ತೀವ್ರ ಏರಿಳಿತದ ಸಮಸ್ಯೆಯಿಂದ ಸೂಪರ್​ಸ್ಟಾರ್​ ರಜಿನಿಕಾಂತ್ ಅವರು ಶುಕ್ರವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ರಜಿನಿಕಾಂತ್​ ಅವರು ಚೆನ್ನೈ ಹೊರ ವಲಯದ ಫಾರ್ಮ್​ ಹೌಸ್​ನಲ್ಲಿ ಪ್ರತ್ಯೇಕವಾಗಿದ್ದರು. ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್​ ಪ್ರತ್ಯೇಕವಾಗಿದ್ದರು. ಇದನ್ನೂ ಓದಿ: ಮಗಳ ಪಾಲಿಗೆ ತಂದೆಯೇ ವಿಲನ್: ಡೈರಿಯಲ್ಲಿ ಅಪ್ಪನ ಪೈಶಾಚಿಕ ಕೃತ್ಯದ ಇಂಚಿಂಚೂ ಮಾಹಿತಿ ಬರೆದಿಟ್ಟ ಪುತ್ರಿ! ಇದೀಗ ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ಚೆನ್ನೈ ಅಪೋಲೋ ಆಸ್ಪತ್ರೆಗೆ … Continue reading ಸೂಪರ್​ಸ್ಟಾರ್​ ರಜಿನಿಕಾಂತ್​ ಆಸ್ಪತ್ರೆಗೆ ದಾಖಲು