ನರೇಂದ್ರ ಮೋದಿ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಸೂಪರ್ ಸ್ಟಾರ್​ ರಜನೀಕಾಂತ್!

modi
Published on

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಗೆಲುವು ಸಾಧಿಸಿದ್ದು, ಪ್ರಧಾನಿಯಾಗಿ ಸತತ ಮೂರನೇ ಬಾರಿ ನರೇಂದ್ರ ಮೋದಿ ಜೂನ್‌ 9 (ಭಾನುವಾರ) ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ವಿದೇಶದ ಕೆಲವು ಅತಿಥಿಗಳ ಜೊತೆಗೆ ದೇಶದ ಹಲವು ಪ್ರಮುಖ ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಹಾಗೂ ಉದ್ಯಮಿಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಈಗಾಗಲೇ ಕೆಲವು ದೇಶಗಳ ಪ್ರಧಾನ ಮಂತ್ರಿಗಳು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಇನ್ನೂ ದಕ್ಷಿಣ ಭಾರತದಿಂದಲೂ ಕೆಲವು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಪ್ರಧಾನಿ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ಸೂಪರ್ ಸ್ಟಾರ್​ ರಜನೀಕಾಂತ್ ಈಗಾಗಲೇ ದೆಹಲಿ ತಲುಪಿದ್ದು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ. ಇದು ಅತ್ಯಂತ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಪ್ರಧಾನಿ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ ಎಂದು ನವದೆಹಲಿಗೆ ತೆರಳುವ ವೇಳೆ ಮಾಧ್ಯಮಕ್ಕೆ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ.

"ನಾನು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ. ಇದು ಅತ್ಯಂತ ಐತಿಹಾಸಿಕ ಘಟನೆಯಾಗಿದೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡಿರುವುದು ನರೇಂದ್ರ ಮೋದಿಯವರ ದೊಡ್ಡ ಸಾಧನೆಯಾಗಿದೆ, ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಜನರು ದೃಢವಾದ ಪ್ರತಿಪಕ್ಷವನ್ನು ಆಯ್ಕೆ ಮಾಡಿದ್ದಾರೆ, ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ.

ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಜನರು ಪ್ರಬಲ ಪ್ರತಿಪಕ್ಷವನ್ನೂ ಆಯ್ಕೆ ಮಾಡಿದ್ದಾರೆ. ಇದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಕಾರಣವಾಗುತ್ತದೆ. ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿದೆ. ಅಲ್ಲಿಗೆ ಹೋಗುವ ಬಗ್ಗೆ ನಾನು ನಿಮಗೆ ತಿಳಿಸುತ್ತೇನೆ ಎಂದರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net