ರಜನಿಕಾಂತ್​ ಅಭಿನಯದ ಹೊಸ ಚಿತ್ರಕ್ಕೆ 'ಜೈ ಭೀಮ್​' ನಿರ್ದೇಶಕರ ಆಕ್ಷನ್​-ಕಟ್​

Rajanikanth
Published on

ಚೆನ್ನೈ: 'ಜೈಲರ್​' ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಕಾಲಿವುಡ್​ನ ಸೂಪರ್​ ಸ್ಟಾರ್​ ರಜನಿಕಾಂತ್​, ಆ ಚಿತ್ರ ಮುಗಿಯುವುದಕ್ಕಿಂತ ಮೊದಲೇ ಇನ್ನೊಂದು ಹೊಸ ಚಿತ್ರಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ವಿಶೇಷವೆಂದರೆ, ಈ ಚಿತ್ರವನ್ನು 'ಜೈ ಭೀಮ್​' ನಿರ್ದೇಶಿಸಿದ್ದ ಟಿ.ಜೆ. ಜ್ನಾನವೇಲ್​ ನಿರ್ದೇಶನ ಮಾಡುತ್ತಿದ್ದಾರೆ.

ಅಂದಹಾಗೆ, ಈ ಚಿತ್ರವನ್ನು ನಿರ್ಮಿಸುತ್ತಿರುವುದು ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆಯ ಅಲಿರಾಜ ಸುಭಾಸ್ಕರನ್​. ಈ ಹಿಂದೆ, ರಜನಿಕಾಂತ್​ ಅಭಿನಯದಲ್ಲಿ '2.0' ಮತ್ತು 'ದರ್ಬಾರ್​' ಚಿತ್ರಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆಯು, ಈ ಚಿತ್ರವನ್ನು ನಿರ್ಮಿಸುತ್ತಿದ್ದೆ. ಈ ಚಿತ್ರಕ್ಕೆ ಸದ್ಯಕ್ಕೆ 'ಥಲೈವರ್ 170' ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದ್ದು, ನಿಜವಾದ ಹೆಸರನ್ನು ಸದ್ಯದಲ್ಲೇ ಘೋಷಿಸಲಾಗುವುದು.

'ಥಲೈವರ್​ 170' ಚಿತ್ರಕ್ಕೆ ಅನಿರುದ್ಧ್​ ರವಿಚಂದರ್​ ನಿರ್ದೇಶನ ಮಾಡುತ್ತಿದ್ದಾರೆ. ಮಿಕ್ಕಂತೆ ಉಳಿದ ಕಲಾವಿದರು ಮತ್ತು ತಂತ್ರಜ್ನರ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ. 2024ರಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆಯಂತೆ.

ರಜನಿಕಾಂತ್​ ಅಭಿನಯದ 'ಜೈಲರ್​' ಚಿತ್ರೀಕರಣ ಮುಗಿಯುತ್ತಾ ಬಂದಿದ್ದು, ಈ ಚಿತ್ರದಲ್ಲಿ ತಮನ್ನಾ ಭಾಟಿಯಾ, ಶಿವರಾಜಕುಮಾರ್​, ಮೋಹನ್​ ಲಾಲ್​, ಜಾಕಿ ಶ್ರಾಫ್​ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನೆಲ್ಸನ್​ ದಿಲೀಪ್​ ಕುಮಾರ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net