21.7 C
Bengaluru
Tuesday, January 21, 2020

ಸೂಪರ್​ಸ್ಟಾರ್​ ರಜಿನಿಕಾಂತ್​ರ ದರ್ಬಾರ್​ ಚಿತ್ರದ ಶೂಟಿಂಗ್​ ವೇಳೆ ಕಲ್ಲು ತೂರಿದ ಕಾಲೇಜು ವಿದ್ಯಾರ್ಥಿಗಳು: ಶೂಟಿಂಗ್​ ಸ್ಥಗಿತ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ: ಸೂಪರ್​ಸ್ಟಾರ್​ ರಜಿನಿಕಾಂತ್​ ಅಭಿನಯದ ಬಹುನಿರೀಕ್ಷಿತ ‘ದರ್ಬಾರ್’​ ಚಿತ್ರದ ಚಿತ್ರೀಕರಣದ ವೇಳೆ ಕಾಲೇಜು ವಿದ್ಯಾರ್ಥಿಗಳು ನಡೆಸಿದ ಕಲ್ಲು ತೂರಾಟದಿಂದ ಕೆಲಕಾಲ ಚಿತ್ರೀಕರಣ ಸ್ಥಗಿತಗೊಂಡ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ.

ನಿನ್ನೆ(ಗುರುವಾರ) ಮುಂಬೈನ ಕಾಲೇಜೊಂದರಲ್ಲಿ ಚಿತ್ರತಂಡ ಶೂಟಿಂಗ್​ ಕೈಗೊಂಡಿತ್ತು. ಆದರೆ, ಕಾಲೇಜು ವಿದ್ಯಾರ್ಥಿಗಳು ಚಿತ್ರತಂಡ ಹೇರಿದ್ದ ನಿಯಮಗಳಿಂದ ರೊಚ್ಚಿಗೆದ್ದು ಕಲ್ಲು ತೂರಿದ್ದಾರೆ. ಅಷ್ಟಕ್ಕೂ ದರ್ಬಾರ್​ ಚಿತ್ರತಂಡವೇರಿದ್ದ ನಿಯಮಗಳೆಂದರೆ ಶೂಟಿಂಗ್​ ವೇಳೆ ಫೋಟೋಗಳನ್ನಾಗಲಿ ಅಥವಾ ವಿಡಿಯೋ ರೆಕಾರ್ಡ್ ಆಗಲಿ ಮಾಡುವಂತಿಲ್ಲ. ಅಲ್ಲದೆ, ಇದನ್ನು ತಡೆಯಲು ಶೂಟಿಂಗ್​​ ಪ್ರದೇಶದ ಸುತ್ತಾ ಬ್ಯಾರಿಕೇಡ್​ಗಳನ್ನು ಅಳವಡಿಸಿ ವಿದ್ಯಾರ್ಥಿಗಳನ್ನು ಒಳಗೆ ಪ್ರವೇಶದಂತೆ ತೀವ್ರ ನಿಗಾ ಇರಿಸಲಾಗಿತ್ತು.

ಚಿತ್ರತಂಡದ ಈ ನಿಯಮದಿಂದ ಆಕ್ರೋಶಭರಿತರಾದ ವಿದ್ಯಾರ್ಥಿಗಳು ಕಾಲೇಜು ಕಟ್ಟಡದ ಮೇಲೆ ನಿಂತು ಚಿತ್ರತಂಡದ ಮೇಲೆ ಕಲ್ಲು ತೂರಿದ್ದಾರೆ. ಅಲ್ಲದೆ, ನಮ್ಮ ಕಾಲೇಜಿಗೆ ಬಂದು ನಮಗೇ ಶೂಟಿಂಗ್​ ನೋಡಲು ಅವಕಾಶ ಮಾಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆಯನ್ನು ನಡೆಸಿದರು. ಈ ಗೊಂದಲದಿಂದ ಕೆಲಕಾಲ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಯಿತು.

ಘಟನೆ ಸಂಬಂಧ ನಿರ್ದೇಶಕ ಎ.ಆರ್​. ಮುರುಗದಾಸ್​ ಕಾಲೇಜು ನಿರ್ವಹಣಾ ಮಂಡಳಿಗೆ ದೂರು ನೀಡಿದ್ದು, ಶೂಟಿಂಗ್​ ಸ್ಥಳವನ್ನು ಬದಲಾವಣೆ ಮಾಡುವುದಾಗಿಯೂ ತಿಳಿಸಿದ್ದಾರೆ.

ದರ್ಬಾರ್​ ಚಿತ್ರ ರಜಿನಿಕಾಂತ್​​ ವೃತ್ತಿ ಬದುಕಿನ ವಿಶೇಷ ಸಿನಿಮಾವಾಗಿದ್ದು, ಚಿತ್ರದಲ್ಲಿ ರಜಿನಿಕಾಂತ್​ ಅವರು ಪೊಲೀಸ್ ಅಧಿಕಾರಿ​ ಪಾತ್ರದಲ್ಲಿ ಮಿಂಚಲಿದ್ದಾರೆ. ರಜಿನಿಗೆ ನಾಯಕಿಯಾಗಿ ಬಹುಭಾಷ ನಟಿ ನಯನತಾರ ಅವರು ತೆರೆ ಹಂಚಿಕೊಳ್ಳಲಿದ್ದಾರೆ. 1992ರಲ್ಲಿ ಪಾಂಡಿಯನ್​ ಚಿತ್ರದಲ್ಲಿ ಪೊಲೀಸ್ ಅಧಿಕಾರಿ​ ಪಾತ್ರದಲ್ಲಿ ನಟಿಸಿದ್ದ ರಜಿನಿ ಅವರು 25 ವರ್ಷದ ಬಳಿಕ ಮತ್ತೆ ಅದೇ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...