ರಾಜೀವ್ ಗಾಂಧಿ ಪುತ್ಥಳಿ ಧ್ವಂಸ; ತನಿಖೆ ಕೈಗೊಂಡ ಪೊಲೀಸರು

Untitled design (33)
Published on

ತಮಿಳುನಾಡು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುತ್ಥಳಿ ಧ್ವಂಸಗೊಳಿಸಿದ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾದ ಘಟನೆ ಸೋಮವಾರ (ನ.13) ಬೆಳಗ್ಗೆ ತಮಿಳುನಾಡಿನಲ್ಲಿ ವರದಿಯಾಗಿದೆ.

ಧ್ವಂಸಗೊಳಿಸಲಾದ ರಾಜೀವ್ ಗಾಂಧಿ ಪುತ್ಥಳಿಯನ್ನು ವರ್ಷಗಳ ಹಿಂದೆ ಕನ್ಯಾಕುಮಾರಿ ಜಿಲ್ಲೆಯ ಪುದಪಾಂಡಿಯಲ್ಲಿ ಇರಿಸಲಾಗಿತ್ತು. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಸ್ಥಳೀಯರೊಬ್ಬರು ಪುತ್ಥಳಿ ಹಾನಿಯಾಗಿರುವುದನ್ನು ಪತ್ತೆಹಚ್ಚಿದ್ದು, ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ದೌಡಾಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸದ್ಯ ಈ ಸಂಬಂಧ ಪುದಪಾಂಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net