Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ರಾಜೀವ್ ಹಂತಕರ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿರೋಧ

Saturday, 11.08.2018, 3:02 AM       No Comments

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ರಾಜೀವ್ ಹತ್ಯೆ ಭಾರತೀಯ ಪ್ರಜಾತಂತ್ರ ವ್ಯವಸ್ಥೆ ಮೇಲಿನ ದಾಳಿಯಾಗಿದೆ. ಇಂತಹ ಹೀನ ಕೃತ್ಯ ಎಸಗಿದವರಿಗೆ ಶಿಕ್ಷೆಯಿಂದ ಮುಕ್ತಿ ನೀಡಲಾಗದು. ಅಪರಾಧಿಗಳಿಗೆ ಅಧೀನ ನ್ಯಾಯಾಲಯ ಮರಣ ದಂಡನೆ ವಿಧಿಸಿತ್ತು. ಇವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ಗೆ ಸರ್ಕಾರ ತಿಳಿಸಿದೆ.

ರಾಜೀವ್ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿತ್ತು. ಆದರೆ ಕೇಂದ್ರ ಸರ್ಕಾರ 2015ರಲ್ಲೇ ಈ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿತ್ತು. ಬಳಿಕ ಮದ್ರಾಸ್ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್​ಗೆ ಅಪರಾಧಿಗಳು ಅರ್ಜಿ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರ ಅಪರಾಧಿಗಳ ಪರವಾಗಿ ವಾದಿಸಿತ್ತು. ಇವರ ಬಿಡುಗಡೆಗೆ ಆಕ್ಷೇಪವಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜೀವ್ ಪುತ್ರ ರಾಹುಲ್ ಗಾಂಧಿ ಹೇಳಿದ್ದರು. ಸರ್ಕಾರ ಒಪ್ಪಿದರೆ ಅಪರಾಧಿಗಳ ಬಿಡುಗಡೆ ಸಾಧ್ಯ ಎಂದು 2015ರಲ್ಲಿ ಸುಪ್ರೀಂ ಕೋರ್ಟ್​ನ ಸಂವಿಧಾನ ಪೀಠ ಹೇಳಿತ್ತು. ಕೇಂದ್ರ ಸರ್ಕಾರ ಮೊದಲಿನಿಂದಲೂ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತ ಬಂದಿದೆ.

Leave a Reply

Your email address will not be published. Required fields are marked *

Back To Top