More

    ಸುಳ್ಯದಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ

    ಸುಳ್ಯ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ ಮಂಗಳವಾರ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್. ಜಯಪ್ರಕಾಶ್ ರೈ ಅವರು ದಿ.ರಾಜೀವ್ ಗಾಂಧಿ ಅವರ ತ್ಯಾಗ, ಬಲಿದಾನ ಮತ್ತು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಸ್ಮರಿಸಿ ನುಡಿನಮನ ಸಲ್ಲಿಸಿದರು.

    ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಕೆ.ಎಂ. ಮುಸ್ತಫಾ ಮಾತನಾಡಿದರು. ಡಿಸಿಸಿ ಸದಸ್ಯ ನಂದರಾಜ್ ಸಂಕೇಶ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ಅಂಬೆಕಲ್ಲು, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗೋಕುಲ್ ದಾಸ್, ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಸದಸ್ಯ ರಂಜಿತ್ ರೈ ಮೇನಾಲ, ಜತ್ತಪ್ಪ ರೈ, ಶಹೀದ್ ಪಾರೆ, ನಾಗ್‌ಕುಮಾರ್ ಶೆಟ್ಟಿ ಮಕರ್ಂಜ, ಜಮಾಲ್ ಪಂಜ, ಕೇಶವ ಮೊರಂಗಲ್ಲು, ಮಹೇಶ್ ಬೆಳ್ಳರ್ಕರ್, ಶಿವರಾಮ್ ನಾರ್ಕೋಡು, ಗಂಗಾಧರ ಮೇನಾಲ ಉಪಸ್ಥಿತರಿದ್ದರು.

    ಜಿಲ್ಲಾ ಎಸ್.ಟಿ. ಸೆಲ್ ಉಪಾಧ್ಯಕ್ಷ ಭವಾನಿ ಶಂಕರ್ ಕಲ್ಮಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ.ಜೆ. ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts