More

    ದೇಶದಲ್ಲಿಯೇ ಮೊದಲ ಬಾರಿ ಪೇಪರ್‌ಲೆಸ್ ಪರೀಕ್ಷೆ ಘೋಷಿಸಿದ ರಾಜೀವ್‌ಗಾಂಧಿ ವಿವಿ

    ಬೆಂಗಳೂರು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು (ಆರ್‌ಜಿಯುಎಚ್‌ಎಸ್) ದೇಶದಲ್ಲಿಯೇ ಮೊದಲ ಬಾರಿಗೆ ವೈದ್ಯಕೀಯ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ (ಪೇಪರ್‌ಲೆಸ್) ನಡೆಸುತ್ತಿದೆ. ಭಾರತದಮಟ್ಟಿಗೆ ಈ ಪ್ರಯೋಗವನ್ನು ಆರಂಭಿಸಿರುವ ಮೊದಲ ವಿಶ್ವವಿದ್ಯಾಲಯವಾಗಿದೆ ಎಂದು ವಿವಿ ಕುಲಪತಿ ಡಾ. ಎಂ.ಕೆ. ರಮೇಶ್ ತಿಳಿಸಿದರು.

    ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಮಾರ್ಚ್‌ನಲ್ಲಿ ೆಲೋಶಿಪ್ ಮತ್ತು ಪಿಜಿಯೋಥೆರಪಿ ಕೋರ್ಸ್‌ಗಳ ಅಂದಾಜು 2 ಸಾವಿರ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ವ್ಯವಸ್ಥೆಯಲ್ಲಿ ಕಂಡುಬರುವ ತಾಂತ್ರಿಕ ದೋಷಗಳನ್ನು ಸರಿಪಡಿಸಿಕೊಂಡ ನಂತರ ವಿವಿ ವ್ಯಾಪ್ತಿಯಲ್ಲಿರುವ 1,400 ಕಾಲೇಜುಗಳಲ್ಲಿಯೂ ಹೊಸ ವ್ಯವಸ್ಥೆಯನ್ನು ಅಧಿಕೃತವಾಗಿ ಜಾರಿಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

    ಆರ್‌ಜಿಯುಎಚ್‌ಎಸ್ ಈಗಾಗಲೇ ಪರೀಕ್ಷಾ ಸುಧಾರಣೆಯಲ್ಲಿ ಮಾದರಿಯಾಗಿದೆ. ಪರೀಕ್ಷೆ ನಡೆದ ಕೇವಲ 2 ಗಂಟೆಗಳಲ್ಲಿ ಪರೀಕ್ಷಾ ಕೇಂದ್ರಗಳಿಂದಲೇ ಉತ್ತರ ಪತ್ರಿಕೆಗಳನ್ನು ಸ್ಕಾೃನ್ ಮಾಡಿ ಆನ್‌ಲೈನ್‌ನಲ್ಲಿ ಸರ್ವರ್‌ಗೆ ಅಪ್‌ಲೋಡ್ ಮಾಡಲಾಗುತ್ತಿದೆ. ಮೌಲ್ಯಮಾಪನ ಕೂಡ ಆನ್‌ಲೈನ್‌ನಲ್ಲಿಯೇ ನಡೆಸಲಾಗುತ್ತಿದೆ. ಈ ಮಾದರಿಯನ್ನು ಪಕ್ಕದ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ದೆಹಲಿಯ ವಿವಿಧ ವಿಶ್ವವಿದ್ಯಾಲಯಗಳು ಅನುಸರಿಸುತ್ತಿವೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಆನ್‌ಲೈನ್‌ನಲ್ಲಿಯೇ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts