Monday, 17th December 2018  

Vijayavani

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ-ಆರೋಗ್ಯ ಸಚಿವರ ಉಡಾಫೆ ಹೇಳಿಕೆ ಪ್ರಸ್ತಾಪ-ಪರಿಷತ್​ನಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ        ಶುರುವಾಯ್ತು ಪೆಥಾಯ್ ಪ್ರತಾಪ-ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಅಲೆಗಳ ಅಬ್ಬರ-ಚೆನ್ನೈ ಸೇರಿ ಹಲವೆಡೆ ಭಾರಿ ಮಳೆ ಸಾಧ್ಯತೆ        ಒಂದೇ ರಸ್ತೆ, ಎರಡು ಇಲಾಖೆ ಬಿಲ್-ಭೂಸೇನೆ, ಪಿಡಬ್ಲ್ಯೂಡಿ ಇಲಾಖೆ ಬಿಲ್​​ಗಾಗಿ ಪೈಪೋಟಿ-ಮುಗಿದ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ ಕೈ ಶಾಸಕ        ಇನ್ನೂ ನಿಂತಿಲ್ಲ ‘ವಿಷ’ಪ್ರಸಾದದ ಎಫೆಕ್ಟ್-ಚಿಕಿತ್ಸೆ ಪಡೀತಿರೋ 30 ಜನ್ರ ಸ್ಥಿತಿ ಗಂಭೀರ-ಆರೋಪಿತರ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ        ಇಂದು 3 ರಾಜ್ಯ ಸಿಎಂಗಳ ಪದಗ್ರಹಣ-ರಾಜ್ಯದಿಂದ ಸಿಎಂ ಎಚ್​ಡಿಕೆ, ಸಿದ್ದುಗೆ ವಿಶೇಷ ಆಹ್ವಾನ-ಕೈ ಸಮಾರಂಭದಲ್ಲಿ ತೃತೀಯ ಶಕ್ತಿ ಪ್ರದರ್ಶನ        37ನೇ ವಸಂತಕ್ಕೆ ‘ಉಗ್ರಂ’ ಸ್ಟಾರ್ ಮುರಳಿ-37ನೇ ಬರ್ತಡೇ.. 37 ಕೆಜಿ ಕೇಕ್ ಕಟ್-ಫ್ಯಾನ್ಸ್​​ಗೆ ಭರಾಟೆ ಟೀಸರ್, ಮದಗಜ ಫಸ್ಟ್ ಪೋಸ್ಟರ್ ಗಿಫ್ಟ್       
Breaking News

ರಾಯರ ದರ್ಶನದಿಂದಲೇ ರಾಜ್‌ ಕುಟುಂಬ ಬೆಳೆದಿದೆ: ರಾಘವೇಂದ್ರ ರಾಜ್‌ಕುಮಾರ್‌

Wednesday, 13.06.2018, 7:58 PM       No Comments

ರಾಯಚೂರು: ರಾಘವೇಂದ್ರ ಸ್ವಾಮಿ ದರ್ಶನದಿಂದ ನನ್ನ ಆರೋಗ್ಯ ಸುಧಾರಿಸಿದೆ. ರಾಯರ ಆಶೀರ್ವಾದದಿಂದಲೇ ನಮ್ಮ ಕುಟುಂಬ ಬೆಳೆದಿದೆ ಎಂದು ನಟ ರಾಘವೇಂದ್ರ ರಾಜ್‌ಕುಮಾರ್‌ ತಿಳಿಸಿದರು.

ರಾಯಚೂರಿನ ಮಂತ್ರಾಲಯದ ರಾಘವೇಂದ್ರ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಉರುಳು ಸೇವೆ ಮಾಡಿ ರಾಯರ ದರ್ಶನ ಪಡೆದ ನಂತರ ಮಾತನಾಡಿ, ಕಳೆದ ಬಾರಿ ಮಠಕ್ಕೆ ಬಂದಾಗ ನನ್ನಿಂದ ನಡೆಯಲು ಆಗುತ್ತಿರಲಿಲ್ಲ. ಆದರೆ, ಈ ಬಾರಿ ರಾಯರ ದರ್ಶನದಿಂದ ಉರುಳು ಸೇವೆ ಮಾಡಿದ್ದೇನೆ ಎಂದರು.

ಮುಂದಿನ ದಿನಗಳಲ್ಲಿ ಮಠದಂಗಳದಲ್ಲಿ ನಾನು ಓಡಾಡುತ್ತೇನೆ. ತಂದೆಯವರ ಮಾರ್ಗದರ್ಶನದಲ್ಲಿ ನಾವು ಮಠಕ್ಕೆ ಪ್ರತಿ ವರ್ಷ ಬರುತ್ತೇವೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಾವು ಬೇಡಿಕೊಂಡಿದ್ದೇವೆ. ಹೊಸ ಕಾರ್ಯ ಆರಂಭಿಸುವಾಗ ಮಠಕ್ಕೆ ನಾವು ಬರುತ್ತೇವೆ ಎಂದು ತಿಳಿಸಿದರು.

ಪುತ್ರ ಮತ್ತು ನಟ ವಿನಯ್‌ ರಾಜ್‌ಕುಮಾರ್‌ ಮಾತನಾಡಿ, ನೂತನ ಸಿನಿಮಾ ಸ್ಕ್ರಿಪ್ಟ್ ಪೂಜೆಗಾಗಿ ಮಂತ್ರಾಲಯಕ್ಕೆ ಬಂದಿದ್ದೇವೆ. ಪುನೀತ್ ಜತೆ ನಟಿಸುವ ಆಸೆಯಿದೆ. ನೂತನ ಸಿನಿಮಾ ಗ್ರಾಮಾಯಣ ಆಗಸ್ಟ್‌ನಲ್ಲಿ ಸೆಟ್ಟೇರಲಿದೆ. ಹೀಗಾಗಿ ನಾಳೆ ಸಿನಿಮಾ ಸ್ಕ್ರಿಪ್ಟ್ ಪೂಜಾ ಕಾರ್ಯಕ್ರಮ ನಡೆಯಲಿದೆ. ಉತ್ತಮ ಕಥೆಗಳು ಸಿಕ್ಕಾಗ ನಟಿಸುವೆ. ಸದ್ಯ ಹೆಚ್ಚಿನ ಪ್ರಾಜೆಕ್ಟ್‌ಗಳು ಇಲ್ಲ ಎಂದರು.

ರಾಘವೇಂದ್ರ ರಾಜ್​​ಕುಮಾರ್ ಅವರೊಂದಿಗೆ ವಿನಯ್ ರಾಜ್​​ಕುಮಾರ್ ಸಹ ಉರುಳು ಸೇವೆ ಮಾಡಿ ದರ್ಶನ ಪಡೆದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top