More

    ಸುಖದೇವ್​ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣ; ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

    ಜೈಪುರ: ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್ ಗೊಗಮೆಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದು ತನ್ನ ಕೃತ್ಯ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೇಳಿಕೊಂಡಿದೆ.

    ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಮುಖ್ಯಸ್ಥನಾಗಿದ್ದ ಸುಖದೇವ್ ಮೇಲೆ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸುಖದೇವ್ ಸಿಂಗ್ ಮತ್ತು ಆತನ ಇಬ್ಬರು ಸಹವರ್ತಿಗಳಿಗೆ ಗುಂಡೇಟಿನಿಂದ ಗಾಯಗಳಾಗಿದ್ದವು. ಮೂವರನ್ನೂ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಸುಖದೇವ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.

    ಇದನ್ನೂ ಓದಿ: 26/11 ದಾಳಿ ಸಂಚುಕೋರ ಸಾಜಿದ್​ ಮೀರ್​ಗೆ ಜೈಲಲ್ಲೇ ವಿಷಪ್ರಾಶನ; ಸ್ಥಿತಿ ಗಂಭೀ

    ಸುಖದೇವ್ ಸಿಂಗ್ ಗೊಗಾಮೇದಿ ಕೊಲೆಗೆ ತಾನೇ ಹೊಣೆ ಎಂದು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜತೆ ನಂಟು ಹೊಂದಿರುವ ರೋಹಿತ್ ಗೊಡಾರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾನೆ. ರಾಜಸ್ಥಾನದ ನಟೋರಿಯಸ್ ಗ್ಯಾಂಗ್‌ಸ್ಟರ್ ಆಗಿರುವ ರೋಹಿತ್, ಭಾರತದಿಂದ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಎನ್‌ಐಎ ಕೂಡ ಕ್ರಮ ಕೈಗೊಂಡಿತ್ತು.

    ಸುಖದೇವ್ ಸಿಂಗ್ ಗೊಗಮೇಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts