ಮತದಾರರ ಒಲವು ಕಾಂಗ್ರೆಸ್ ಪರವಾಗಿದೆ - ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ

IMG-20241003-WA0152
Published on


ಮಂಗಳೂರು : ಯಾರು ಗೆದ್ದು ಬಂದರೆ ತಮಗೆ ನ್ಯಾಯ ಸಿಗಲಿದೆ ಎನ್ನುವ ಅರಿವು ಮತದಾರರಿಗೆ ಇದೆ. ಮತದಾರರ ಒಲವು ಕಾಂಗ್ರೆಸ್ ಪರವಾಗಿದೆ ಎಂದು ವಿಧಾನ ಪರಿಷತ್ ಉಪ ಚುನಾವಣೆಯ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹೇಳಿದರು.
ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ‘ ಕಳೆದ 20 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾಪಂ, ತಾಲೂಕು ಪಂಚಾಯಿತಿ ಸದಸ್ಯನಾಗಿ, ಜಿಲ್ಲಾ ಪಂಚಾಯಿತಿಯಲ್ಲಿ 2 ಬಾರಿ ಸದಸ್ಯನಾಗಿ, ಜಿಪಂ ಅಧ್ಯಕ್ಷನಾಗಿ ಸ್ಥಳೀಯ ಸಂಸ್ಥೆಗಳ ಅರಿವು ಇರುವುದರಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಅವಕಾಶ ಕಲ್ಪಿಸಿದೆ ಎಂದರು.
ಮೂರು ದಶಕದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಆ ನೆಲೆಯಲ್ಲಿ ಪಕ್ಷ ನನ್ನನ್ನು ಗುರುತಿಸಿದೆ.
ನಾನು ಉಡುಪಿ ಜಿಪಂ ಅಧ್ಯಕ್ಷನಾಗಿದ್ದಾಗ ಸ್ವಂತ ಕಟ್ಟಡ ನಿರ್ಮಾಣ ಸಾಧ್ಯವಾಯಿತು. ನನ್ನ ಅವಧಿಯಲ್ಲಿ ಎಲ್ಲ ಗ್ರಾಪಂಗಳ ಕಂಪ್ಯೂಟರೀಕರಣವಾಗಿದೆ . ಇನ್ನು ಮುಂದಕ್ಕೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಸೇರಿದಂತೆ ಎಲ್ಲ ಅಗತ್ಯತೆಗಳನ್ನು ಪೂರೈಸಲು ಬದ್ಧನಾಗಿದ್ದೇನೆ ಎಂದು ರಾಜು ಪೂಜಾರಿ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ , ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ, ಎಂಎಲ್‌ಸಿ ಐವನ್ ಡಿಸೋಜಾ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಅಶೋಕ್‌ಕುಮಾರ್ ಕೊಡವೂರು, ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಪ್ರಸಾದ್ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net