ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ; 33% ಮೀಸಲಿಡುವ ಮಸೂದೆಯನ್ನು ಅಂಗೀಕರಿಸಿದ ರಾಜ್ಯಸಭೆ!

Untitled design - 2023-09-21T224410.323
Published on

ನವದೆಹಲಿ: ನೂತನ ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಬಳಿಕ ಲೋಕಸಭೆ ಸದನದಲ್ಲಿ ಮಹಿಳೆಯರಿಗೆ 33% ಸ್ಥಾನಗಳನ್ನು ಮೀಸಲಿಡುವ ಮಸೂದೆಯನ್ನು ಇದೀಗ ರಾಜ್ಯಸಭೆ ಅಂಗೀಕರಿಸಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಗುರುವಾರ (ಸೆ.21) ರಾಜ್ಯಸಭೆ ಅಂಗೀಕರಿಸಿದೆ. ಪಕ್ಷದ ಶ್ರೇಣಿಗಳಲ್ಲಿ ಸಂಸದರ ನಡುವೆ ಸುದೀರ್ಘ ಚರ್ಚೆಯ ನಂತರ ಸದನದ ಎಲ್ಲಾ ಸದಸ್ಯರು ಒಮ್ಮತದಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ.

“ಈ ಮಸೂದೆಯು ದೇಶದ ಜನರಲ್ಲಿ ಹೊಸ ವಿಶ್ವಾಸವನ್ನು ಉಂಟುಮಾಡುತ್ತದೆ. ಇದು ಮಹಿಳಾ ಸಬಲೀಕರಣಕ್ಕೆ ಹೊಸ ಶಕ್ತಿ ನೀಡುವ ಎಲ್ಲಾ ರಾಜಕೀಯ ಪಕ್ಷಗಳ ಸಕಾರಾತ್ಮಕ ಚಿಂತನೆಯನ್ನು ತೋರಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net